ಅಕ್ರಮ- ಸಕ್ರಮ ಸಮಿತಿ ಗಮನಕ್ಕೆ ತರದೇ ಲಕ್ಷಾಂತರ ಅರ್ಜಿಗಳ ತಿರಸ್ಕಾರ: ಸುನಿಲ್‌ ಕುಮಾರ್‌ ಆರೋಪ

| Published : Nov 28 2024, 12:31 AM IST

ಅಕ್ರಮ- ಸಕ್ರಮ ಸಮಿತಿ ಗಮನಕ್ಕೆ ತರದೇ ಲಕ್ಷಾಂತರ ಅರ್ಜಿಗಳ ತಿರಸ್ಕಾರ: ಸುನಿಲ್‌ ಕುಮಾರ್‌ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಮಲೆನಾಡು, ಕರಾವಳಿ ಭಾಗಗಳು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರ, ಶಾಸಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಅರ್ಜಿಯ ಅಂಗೀಕಾರ ಅಥವಾ ತಿರಸ್ಕಾರ ಈ ಸಮಿತಿಯಲ್ಲೇ ಆಗಬೇಕು. ಆದರೆ ಅಧಿಕಾರಿಗಳು ಈ ವಿಚಾರವನ್ನು ಸಭೆಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ನಿರಾಕರಿಸುತ್ತಿರುವುದು ಸಂವಿಧಾನ ಬಾಹಿರ.

ಕಾರ್ಕಳ: ಅಕ್ರಮ- ಸಕ್ರಮ (ಬಗರ್ ಹುಕುಂ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಲಕ್ಷಾಂತರ ಅರ್ಜಿ ತಿರಸ್ಕರಿಸಿರುವುದು ಸರ್ಕಾರದ ರೈತ ವಿರೋಧಿ ಕ್ರಮ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಮಲೆನಾಡು, ಕರಾವಳಿ ಭಾಗಗಳು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರ, ಶಾಸಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಅರ್ಜಿಯ ಅಂಗೀಕಾರ ಅಥವಾ ತಿರಸ್ಕಾರ ಈ ಸಮಿತಿಯಲ್ಲೇ ಆಗಬೇಕು. ಆದರೆ ಅಧಿಕಾರಿಗಳು ಈ ವಿಚಾರವನ್ನು ಸಭೆಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ನಿರಾಕರಿಸುತ್ತಿರುವುದು ಸಂವಿಧಾನ ಬಾಹಿರ ಎಂದು ಆರೋಪಿಸಿದ್ದಾರೆ.ಕಂದಾಯ ಸಚಿವ ಕೃಷ್ಣ ಬೈರೇಗೌಡರು ಬಗರ್ ಹುಕುಂ ವಿಚಾರ ಇತ್ಯರ್ಥಗೊಳಿಸಲು ಬದ್ಧ ಎಂದು ಹೇಳಿಕೆ ಕೊಟ್ಟಿದ್ದಾರೆ. ಆದರೆ ಸಚಿವರ ಸೂಚನೆಯ ಮೇರೆಗೆ ಅರ್ಜಿ ಕೈ ಬಿಡಲಾಗಿದೆ ಎಂದು ಅಧಿಕಾರಿಗಳು ಸಬೂಬು ನೀಡುತ್ತಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಮೇಲ್ಪಟ್ಟು ಅರ್ಜಿ ಕೈ ಬಿಡುವಂತೆ ಗುರಿ ನಿಗದಿ ಮಾಡಲಾಗಿದೆ ಎಂಬ ಮಾತುಗಳು ಕೇಳಿಬಂದಿದೆ. ಸರ್ಕಾರ ಈ ಬಗ್ಗೆ ತಕ್ಷಣ ಸ್ಷಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಹಲವು ವರ್ಷಗಳಿಂದ ಈ ಜಾಗದಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿರುವ ರೈತರು ಇದರಿಂದ ಕಂಗಾಲಾಗಿದ್ದಾರೆ. ಅರ್ಜಿ ತಿರಸ್ಕರಿಸುವಾಗ ಅಧಿಕಾರಿಗಳು ರೈತರ ಹೇಳಿಕೆಯನ್ನೂ ದಾಖಲಿಸಿಕೊಳ್ಳುತ್ತಿಲ್ಲ. ಇಂಥ ಏಕಪಕ್ಷೀಯ ನಡವಳಿಕೆ ತಕ್ಷಣ ನಿಲ್ಲಿಸಿ ರೈತರಿಗೆ ನ್ಯಾಯ ನೀಡಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.