ಕ್ಯಾಂಟೀನ್ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದು, ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಸಂಗ್ರಹಿಸುವುದು ಹಾಗೂ ಗ್ರಾಹಕರಿಗೆ ಶುಚಿಯಾದ ವಾತಾವರಣದಲ್ಲಿ ಊಟ- ತಿಂಡಿ ನೀಡುವಂತೆ ಅಧಿಕಾರಿಗಳು ನಿರ್ದೇಶನ ನೀಡಿದರು.
ಶಿರಹಟ್ಟಿ: ಆ. ೨೪ರಂದು ಸೊರಗಿದ ಇಂದಿರಾ ಕ್ಯಾಂಟಿನ್ ತಲೆಬರಹದಡಿ ಕನ್ನಡಪ್ರಭ ಪ್ರಕಟಿಸಿದ್ದ ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಎಂ. ಹಾದಿಮನಿ ಸಿಬ್ಬಂದಿಯೊಂದಿಗೆ ಕ್ಯಾಂಟಿನ್‌ಗೆ ಭೇಟಿ ಪರಿಶೀಲಿಸಿದರು.
ಇಂದಿರಾ ಕ್ಯಾಂಟೀನ್‌ನಲ್ಲಿ ಸ್ವಚ್ಛತೆ ಕೊರತೆ, ಆಹಾರ ಪದಾರ್ಥಗಳ ಅಸಮರ್ಪಕ ನಿರ್ವಹಣೆ ಹಾಗೂ ಅವ್ಯವಸ್ಥೆ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಪಪಂ ಮುಖ್ಯಾಧಿಕಾರಿ ಎನ್.ಎಂ. ಹಾದಿಮನಿ ಮಾತನಾಡಿ, ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿ ಗಮನಿಸಿದ್ದು, ಕ್ಯಾಂಟಿನ್ ಸುತ್ತಲೂ ಇರುವ ಗಲೀಜನ್ನು ಪೌರಕಾರ್ಮಿಕರಿಂದ ಸ್ವಚ್ಛಗೊಳಿಸಿ ಬಡವರು, ಕಾರ್ಮಿಕರು, ವಲಸಿಗರಿಗೆ ಮೆನು ಪ್ರಕಾರ ನಿಯಮಾನುಸಾರ ಊಟ, ಉಪಹಾರ ಕೊಡಲು ಕ್ರಮ ವಹಿಸುವುದಾಗಿ ತಿಳಿಸಿದರು. ಕ್ಯಾಂಟೀನ್‌ನ ಒಳಾಂಗಣ, ಅಡುಗೆ ಕೋಣೆ ಹಾಗೂ ಆಹಾರ ಪದಾರ್ಥಗಳನ್ನು ಸಂಗ್ರಹಿಸುವ ಸ್ಥಳಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಿಬ್ಬಂದಿಗೆ ಸೂಚಿಸಿದರು.ಕ್ಯಾಂಟೀನ್ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದು, ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಸಂಗ್ರಹಿಸುವುದು ಹಾಗೂ ಗ್ರಾಹಕರಿಗೆ ಶುಚಿಯಾದ ವಾತಾವರಣದಲ್ಲಿ ಊಟ- ತಿಂಡಿ ನೀಡುವಂತೆ ಅಧಿಕಾರಿಗಳು ನಿರ್ದೇಶನ ನೀಡಿದರು. ಕ್ಯಾಂಟೀನ್‌ನಲ್ಲಿ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.ಸಹಾಯಧನಕ್ಕೆ ಅರ್ಜಿ ಆಹ್ವಾನ
ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2026- 27ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ಅರಿವು(ವಿದ್ಯಾಭ್ಯಾಸ ಸಾಲ) ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿವಿಧ ಸಾಲ, ಸಹಾಯಧನ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆ. 17 ಕೊನೆಯ ದಿನವಾಗಿದೆ. https://kmdconline.karnataka.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೌಲಾನಾ ಆಜಾದ ಅಲ್ಪಸಂಖ್ಯಾತರ ಭವನ 1ನೇ ಮಹಡಿ ಜಿಲ್ಲಾ ನ್ಯಾಯಾಲಯ ಎದುರುಗಡೆ ಹುಬ್ಬಳ್ಳಿ ರೋಡ್ ಗದಗ, ದೂ. 08372-295147 ಹಾಗೂ ಮೊ. 8277944217 ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.