ಪಡಿತರ ಆಹಾರ ಬಿಡುಗಡೆ

| Published : Sep 12 2024, 01:52 AM IST

ಸಾರಾಂಶ

Release of rationed food

ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯ 2024ರ ಸೆಪ್ಟಂಬರ್ ಮಾಹೆಯಲ್ಲಿ ಯಾದಗಿರಿ ಜಿಲ್ಲೆಯ ಎಎವೈ 28712 ಪಡಿತರ ಚೀಟಿಗಳಿದ್ದು, ಪ್ರತಿ ಪಡಿತರ ಚೀಟಿಗಳಿಗೆ 21 ಕೆಜಿ ಅಕ್ಕಿ ಮತ್ತು 14 ಕೆಜಿ ಜೋಳ ಹಾಗೂ ಬಿಪಿಎಲ್ 8,75,739 ಪಡಿತರ ಸದಸ್ಯರಿದ್ದು, ಪ್ರತಿ ಪಡಿತರ ಸದಸ್ಯರಿಗೆ 3 ಕೆಜಿ ಎನ್‌ಎಫ್‌ಎಸ್‌ಎ ಅಕ್ಕಿ ಮತ್ತು 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯ ಅಡಿಯಲ್ಲಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ತಾಲೂಕು ಮಟ್ಟದಲ್ಲಿ ಆಯಾ ತಾಲೂಕಿನ ತಹಸೀಲ್ದಾರರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲೆಯ ಉಪ ನಿರ್ದೇಶಕರ ಕಛೇರಿಗೆ ದೂ: 08473 253707 ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲಿಸಲು ಕೋರಿದೆ. ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದಕೊಂಡು ನ್ಯಾಯಬೆಲೆ ಅಂಗಡಿಯಿಂದ ಆಹಾರಧಾನ್ಯವನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

------