ಸಾರಾಂಶ
1954ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ , ಕೊಡಗು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುವ 1954ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು.ಕುಶಾಲನಗರ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ಮತ್ತು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಪ್ರಮುಖರು ಬಿಡುಗಡೆಗೊಳಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯರಾದ ಕೆ ಎಸ್ ರಾಜಶೇಖರ್, ಎಂ ಎನ್ ಚಂದ್ರಮೋಹನ್, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಜೆ. ಫಿಲೋಮಿನಾ, ನವ್ಯ, ಗಿರೀಶ್ ಕೂಡ್ಲೂರು, ಮಣಿ, ಪಾರ್ವತಿ, ಯಶೋಧ ಲಲಿತಮ್ಮ, ಹೇಮಾ, ತ್ರಿವೇಣಿ, ಯೋಜನೆಯ ವಲಯ ಮೇಲ್ವಿಚಾರಕರಾದ ನಾಗರಾಜ್, ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.