ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟ

| Published : Mar 16 2024, 01:45 AM IST

ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟ
Share this Article
  • FB
  • TW
  • Linkdin
  • Email

ಸಾರಾಂಶ

ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‌ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ತುಳುವ ನಾಡಿನ ಪುಣ್ಯ ಭೂಮಿಯ ಧರ್ಮ ರಕ್ಷಣೆ ಮತ್ತು ಅಭಿವೃದ್ಧಿ ನನ್ನ ಮುಂದಿನ ಗುರಿ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.

ಬಿ.ಸಿ. ರೋಡ್‌ನಲ್ಲಿರುವ ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರು ಹಾಗೂ ಪಕ್ಷದ ಪ್ರಮುಖರ ಜೊತೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‌ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು. ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಬಂಟ್ವಾಳ ಮಂಡಲ ಪ್ರಭಾರಿ ಪೂಜಾ ಪೈ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್‌, ಹರಿಕೃಷ್ಣ ಬಂಟ್ವಾಳ, ನಾಯಕರಾದ ವಿಕಾಸ್ ಪುತ್ತೂರು, ಜಿಲ್ಲಾ ಪ್ರಭಾರಿ ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಡೊಂಬಯ ಅರಳ, ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್‌ ಮೊದಲಾದವರು ಉಪಸ್ಥಿತರಿದ್ದರು.