ಸಾರಾಂಶ
ಇಂಡಿ: ವಿದ್ಯಾರ್ಥಿಗಳು ವಿಜ್ಞಾನಿಗಳ ಜೀವನ ಅವಲೋಕನ ಮಾಡುವುದ ಜೊತೆ ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಮಿರಗಿ ಗ್ರಾಮದ ಸದ್ಗುರು ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯ ಶಿಕ್ಷಕಿ ನಂದಾ ಎಸ್.ಚವ್ಹಾಣ ಹೇಳಿದರು. ತಾಲೂಕಿನ ಮಿರಗಿ ಗ್ರಾಮದ ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ರಂಗೋಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಇಂಡಿ:
ವಿದ್ಯಾರ್ಥಿಗಳು ವಿಜ್ಞಾನಿಗಳ ಜೀವನ ಅವಲೋಕನ ಮಾಡುವುದ ಜೊತೆ ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಮಿರಗಿ ಗ್ರಾಮದ ಸದ್ಗುರು ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯ ಶಿಕ್ಷಕಿ ನಂದಾ ಎಸ್.ಚವ್ಹಾಣ ಹೇಳಿದರು. ತಾಲೂಕಿನ ಮಿರಗಿ ಗ್ರಾಮದ ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ರಂಗೋಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿದರು.ಸರ್ ಸಿವಿ ರಾಮನ್ ಅವರ ಸಾಧನೆಗಳನ್ನು ಮಾತ್ರವಲ್ಲದೆ ಬೇರೆ ವಿಜ್ಞಾನಿಗಳನ್ನು ಗೌರವಿಸುವ ದೃಷ್ಟಿಯಿಂದ, ವಿಜ್ಞಾನ ಕ್ಷೇತ್ರದಲ್ಲಿ ಅವರ ಸಾಧನೆಗಳನ್ನು ಮೆಲುಕು ಹಾಕಲು ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.ಸಿದ್ದಪ್ಪ ಖೇಡ ಮಾತನಾಡಿ, ಯುವ ಜನರಲ್ಲಿ ಸಂಶೋಧನೆ ಮತ್ತು ಅವಿಷ್ಕಾರಗಳನ್ನು ಉತ್ತೇಜಿಸಲು ವಿಜ್ಞಾನ ದಿನಾಚರಣೆ ಮಹತ್ವ ಪಡೆದುಕೊಂಡಿದೆ. ನಮ್ಮ ರಾಷ್ಟ್ರದ ಬೆಳವಣಿಗೆ ಮತ್ತು ಸಮೃದ್ದಿಗೆ ಅಡಿಪಾಯವಾಗಿರುವ ವಿಜ್ಞಾನಿಗಳ ಅದ್ಭುತ ಸಾಧನೆಗಳನ್ನು ಆಚರಿಸಲು ಇದು ಒಂದು ಸಂದರ್ಭ. ವಿದ್ಯಾರ್ಥಿಗಳು ಪ್ರಸ್ತುತ ದಿನಗಳಿಗೆ ಸಂಬಂಧಿಸಿದಂತೆ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಅಧ್ಯಯನದ ಮೂಲಕ ಸಾಧನೆ ಮಾಡಿ ಯಶಸ್ವಿಸಾಧಿಸಬೇಕು ಎಂದು ಹೇಳಿದರು.ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಜೆ.ಎಸ್.ದೇವರಮನಿ, ಅಶ್ವಿನಿ, ನಾದ ಹಾಗೂ ವಾಲಿಕಾರ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.