ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಪ್ರತಿಯೊಬ್ಬರು ಸ್ಮರಿಸಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ರಿಟಿಷರ ಸಂಕೋಲೆಯಿಂದ ದೇಶಕ್ಕೆ ಸ್ವಾತಂತ್ರ್ಯತಂದು ಕೊಡಲು ಲಕ್ಷಾಂತರ ಮಂದಿ ಭಾರತೀಯರು, ಮನೆ-ಮಠ, ಕುಟುಂಬವನ್ನು ಬಿಟ್ಟು ಹೋರಾಟ ನಡೆಸಿ ತ್ಯಾಗ, ಬಲಿದಾನಗೊಂಡಿದ್ದಾರೆ ಎಂದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಮರೆಯಬಾರದು, ನಿತ್ಯ ಸ್ಮರಣೆ ಮಾಡಬೇಕು. ಒಬ್ಬ ವ್ಯಕ್ತಿ ಜೀವನದಲ್ಲಿ ಯಶಸ್ಸು, ಸಾಧನೆ ಮಾಡಬೇಕಾದರೆ ತ್ಯಾಗ ಬಹಳ ಮುಖ್ಯ. ವಿದ್ಯಾರ್ಥಿಗಳು ಇತಿಹಾಸವನ್ನು ಅಧ್ಯಯನ ಮಾಡುವ ಮೂಲಕ ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದರು.ದೇಶಕ್ಕೆ ಸ್ವಾತಂತ್ರ್ಯಸಿಕ್ಕ ನಂತರ ಭಾರತ ದೇಶ ಇದೀಗ ಸಾಕಷ್ಟು ಪ್ರಗತಿಯಲ್ಲಿ ಸಾಧನೆಯತ್ತ ಮುನ್ನುಗ್ಗುತ್ತಿದೆ. ಹಾಲು ಉತ್ಪಾದನೆಯಲ್ಲಿ ವಿಶ್ವಕ್ಕೆ ಮೊದಲ ಸ್ಥಾನದಲ್ಲಿದೆ. ಪ್ರಪಂಚದಲ್ಲಿಯೇ 6 ನೇ ಆರ್ಥಿಕ ಪ್ರಗತಿ ಸಾಧನೆ ಮಾಡಿವ ರಾಷ್ಟ್ರವಾಗಿದೆ. ದೇಶದಲ್ಲಿ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯಗತ್ಯವಾಗಿ ಬೇಕಿದೆ ಎಂದರು.
ಉಪವಿಭಾಗಾಧಿಕಾರಿ ನಂದೀಶ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಗಳ ತಂಡ ಗಣ್ಯರಿಗೆ ಪಥಸಂಚಲನದ ಮೂಲಕ ವಂದನೆ ಅರ್ಪಿಸಿದರು. ವಿವಿಧ ಶಾಲಾ ಮಕ್ಕಳಿಂದ ದೇಶಪ್ರೇಮ, ತ್ಯಾಗ-ಬಲಿದಾನ, ನಾಡು-ನುಡಿಗೆ ಸಂಬಂಧಿಸಿದ ಹಾಡುಗಳಿಗೆ ನೃತ್ಯ ಮಾಡಿ ವಿದ್ಯಾರ್ಥಿಗಳು, ಪ್ರೇಕ್ಷಕರು, ಗಣ್ಯರನ್ನು ರಂಚಿಸಿದರು. ಉತ್ತಮ ಸಂದೇಶವೊಳ್ಳ ನೃತ್ಯ ಪ್ರದರ್ಶನ ಮಾಡಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳು, ನಾನಾ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಂತೋಷ್, ಪ್ರಾಧ್ಯಾಪಕ ಚಲುವೇಗೌಡ, ತಾಪಂ ಇಓ ಲೋಕೇಶ್‌ಮೂರ್ತಿ, ಬಿಇಓ ರವಿಕುಮಾರ್, ಮುಖ್ಯಾಧಿಕಾರಿ ಸತೀಶ್‌ಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ವಿವೇಕನಂದ, ಪಿಎಸ್‌ಐ ಉಮೇಶ್, ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ದಯಾನಂದ, ರೈತಸಂಘದ ಅಧ್ಯಕ್ಷ ನಾಗರಾಜು ಸೇರಿದಂತೆ ಪುರಸಭೆ ಸದಸ್ಯರು, ಮುಖಂಡರು, ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))