ಸ್ವತಂತ್ರ ಹೋರಾಟಗಾರರ ಬಲಿದಾನ ಸ್ಮರಿಸಿ: ಡಾ.ಸಿದ್ದಲಿಂಗಪ್ಪಾ ಪಾಟೀಲ್

| Published : Aug 16 2025, 12:00 AM IST

ಸ್ವತಂತ್ರ ಹೋರಾಟಗಾರರ ಬಲಿದಾನ ಸ್ಮರಿಸಿ: ಡಾ.ಸಿದ್ದಲಿಂಗಪ್ಪಾ ಪಾಟೀಲ್
Share this Article
  • FB
  • TW
  • Linkdin
  • Email

ಸಾರಾಂಶ

ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯಲ ಹೋರಾಟಗಾರರ ಬಲಿದಾನ ಸ್ಮರಿಸಿ ಗೌರವ ಸಲ್ಲಿಸಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಹೇಳಿದರು.

ಕನ್ನಡಪ್ರಭ ವಾರ್ತೆ ಹುಮನಾಬಾದ್

ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯಲ ಹೋರಾಟಗಾರರ ಬಲಿದಾನ ಸ್ಮರಿಸಿ ಗೌರವ ಸಲ್ಲಿಸಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಹೇಳಿದರು.

ಪಟ್ಟಣದಲ್ಲಿ ತಾಲೂಕು ಆಡಳಿತದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಎಂದರೆ ಅದು ಜೀವನದ ಉಸಿರು ಸಾವಿರಾರು ಮಂದಿ ತಮ್ಮ ಮನೆ ಮಠ ಹಾಗೂ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಇದನ್ನು ಹೊಸ ಪೀಳಿಗೆಗೆ ತಿಳಿಸಬೇಕಾಗಿದೆ ಎಂದರು.

ಪಟ್ಟಣದಲ್ಲಿ ಶುದ್ಧ ಗಾಳಿ, ನೀರು, ರಸ್ತೆ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮೇಲ್ದರ್ಜೆಗೇರಿಸಲು ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ಪ್ರಯತ್ನ ಮಾಡಲಾಗುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಲ್ಲರೂ ಒಟ್ಟಾಗಿ ಸಾರ್ವಜನಿಕರ ಸಹಕಾರ ನೀಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ರೈತರು ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಇದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದ ಅವರು ಈಗಾಗಲೇ ವಿವಿಧ ಯೋಜನೆಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯದ ಜೊತೆಗೆ ಶಾಶ್ವತ ಕುಡಿಯುವ ನೀರಿಗಾಗಿ ಅಮೃತ ಯೋಜನೆ-2, ರಾಷ್ಟ್ರೀಯ ಹೆದ್ದಾರಿ 65ರ ಮೇಲೆ ಅಪಘಾತಗಳು ಸಂಭವಿ ಸುತ್ತಿದ್ದು, ಅದಕ್ಕೆ ಮೇಲ ಸೇತುವೆಗೆ ಕೇಂದ್ರ ಸರ್ಕಾರದಿಂದ 50 ಕೋಟಿ ಅನುದಾನ ತರುವ ಮೂಲಕ ಈಗಾಗಲೇ ಕಾಮಗಾರಿ ಪ್ರಾರಂಭಗೊಂಡಿದೆ ಎಂದು ಮಾಹಿತಿ ನೀಡಿದರು.

ತಹಸೀಲ್ದಾರ್‌ ಅಂಜುಮ್ ತಬಸುಮ್ ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಭೀಮರಾವ್‌ ಪಾಟೀಲ್, ತಾ.ಪಂ ಅಧಿಕಾರಿ ದೀಪಿಕಾ ನಾಯಕ್, ಪುರಸಭೆ ಮುಖ್ಯಾಧಿಕಾರಿ ವನೀತಾಬಾಯಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಇದ್ದರು.