ಸಾರಾಂಶ
ಹೈದ್ರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಅನೇಕ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಎಲ್ಲ ಮಹನೀಯರನ್ನು ಸ್ಮರಿಸಬೇಕು ಮತ್ತು ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.
ಕನ್ನಡಪ್ರಭ ವಾರ್ತೆ ಔರಾದ್
ಹೈದ್ರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಅನೇಕ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಎಲ್ಲ ಮಹನೀಯರನ್ನು ಸ್ಮರಿಸಬೇಕು ಮತ್ತು ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.ಔರಾದ್(ಬಿ) ತಾಲ್ಲೂಕು ಆಡಳಿತದಿಂದ ಸೆ.17ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಜಾಮನ ಆಡಳಿತದಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರೆನ್ನದೇ ಎಲ್ಲರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಿದ್ದವು. ಹಿಂದೂ ಧರ್ಮಿಯರನ್ನು ಗುರಿಯಾಗಿಸಿಕೊಂಡು ಹೀಂಸೆ ಕೊಡಲಾಗುತ್ತಿತ್ತು ನಿಜಾಮರಿಂದ ವಿಮುಕ್ತಿ ಸಾಧಿಸಲು ಅನೇಕ ಹೋರಾಟಗಾರರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಉಕ್ಕಿನ ಮನುಷ್ಯನೆಂದು ಖ್ಯಾತರಾದ ದೇಶದ ಪ್ರಥಮ ಉಪ ಪ್ರಧಾನಿ ಹಾಗೂ ಗೃಹ ಸಚಿವ ಸರದಾರ ವಲ್ಲಭಭಾಯಿ ಪಟೇಲ್ ಅವರು ನಡೆಸಿದ ಪೊಲೀಸ್ ಕಾರ್ಯಾಚರಣೆಯಿಂದಾಗಿ ನಿಜಾಮರ ಆಳ್ವಿಕೆಯಿಂದ ವಿಮುಕ್ತಿ ಹೊಂದಲಾಯಿತು. ನಮ್ಮ ಭಾಗಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಸ್ವಾತಂತ್ರ್ಯ ದಿನಾಚರಣೆಯಷ್ಟೇ ಮಹತ್ವ ಪಡೆದಿದೆ ಎಂದು ತಿಳಿಸಿದರು.
ಮಾರುತಿ ಗಾದಗೆ ವಿಶೇಷ ಉಪನ್ಯಾಸ ನೀಡಿದರು. ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಪಟ್ಟಣ ಪಂಚಾಯತ್ ಅಧ್ಯಕ್ಷೆ ಸರುಬಾಯಿ ಘೂಳೆ, ತಾ.ಪಂ ಅಧಿಕಾರಿ ಕಿರಣ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ ರಂಗೇಶ, ಆರಕ್ಷಕ ವೃತ್ತ ನಿರೀಕ್ಷಕ ರಘುವೀರಸಿಂಗ್ ಠಾಕೂರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಶಿಶು ಅಭಿವೃದ್ಧಿ ಅಧಿಕಾರಿ ಇಮಲಪ್ಪ, ಮಾಣಿಕರಾವ್ ನೇಳಗೆ, ಮುಖಂಡರಾದ ಧೊಂಡಿಬಾ ನರೋಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.