ಸಾರಾಂಶ
ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತ, ಕನ್ನಡ ರಾಜ್ಯೋತ್ಸವ ಕೇವಲ ನವಂಬರ್ ತಿಂಗಳಿಗೆ ಸೀಮಿತವಾಗದೆ ವರ್ಷದ ೩೬೫ ದಿನ ನಿತ್ಯೋತ್ಸವ ಆಗಿ ಆಚರಣೆ ಆಗಲಿ.
ಕನ್ನಡಪ್ರಭ ವಾರ್ತೆ ಕೋಲಾರ ವೇಮಗಲ್‌ನಲ್ಲಿ ೮ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಧ್ವಜರೋಹಣ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ರವರು ನೆರವೇರಿಸಿದರು. ಭುವನೇಶ್ವರಿ ದೇವಿ ಮತ್ತು ದಿ.ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ವಾರ್ಚೆನೆ ಸಲ್ಲಿಸಿದರು. ಸಿಹಿ ಹಂಚಿ ಕನ್ನಡಾಂಭೆಗೆ ಜೈಕಾರ ಹಾಕಿದರು. ವಿವಿಧ ಬಗೆಯ ಹೂವುಗಳಿಂದ ವಿಶೇಷ ರೀತಿಯಲ್ಲಿ ಶೃಂಗಾರಗೊಂಡಿದ್ದ ಆಟೋಗಳು, ವೀರಗಾಸೆ, ಕಲಾ ತಂಡಗಳು, ಮತ್ತು ವಾದ್ಯಗೋಷ್ಠಿಗಳ ಮೆರವಣಿಗೆಗೆ ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಚಾಲನೆ ನೀಡಿದರು.
ರಾಜ್ಯೋತ್ಸವ ನಿತ್ಯೋತ್ಸವವಾಗಲಿಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತ, ಕನ್ನಡ ರಾಜ್ಯೋತ್ಸವ ಕೇವಲ ನವಂಬರ್ ತಿಂಗಳಿಗೆ ಸೀಮಿತವಾಗದೆ ವರ್ಷದ ೩೬೫ ದಿನ ನಿತ್ಯೋತ್ಸವ ಆಗಿ ಆಚರಣೆ ಆಗಲಿ ಎಂದರು.
ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಮಾತನಾಡಿ, ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬ ಕನ್ನಡಿಗರು ಮಾಡಬೇಕು, ಗ್ರಾಮೀಣ ಭಾಗದ ಮಕ್ಕಳು ಹೆಚ್ಚು ಪ್ರತಿಭಾವಂತರಾಗಿದ್ದು, ಸಾಧನೆ ಮಾಡಲು ಹಲವು ಅವಕಾಶಗಳಿವೆ ಅವುಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಮಾಡಿ ಪಟ್ಟಣಕ್ಕೆ, ತಂದೆ ತಾಯಿ ಕುಟುಂಬಕ್ಕೆ ಒಳ್ಳೆಯ ಕೀರ್ತಿ ತರಬೇಕು ಎಂದು ತಿಳಿಸಿದರು.ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಮುಖಂಡರಾದ ಲಕ್ಷ್ಮಣ್ ಗೌಡ, ಕುರ್ಕಿ ರಾಜೇಶ್ವರಿ, ವೇಮಗಲ್ ಪಪಂ ಮುಖ್ಯಾಧಿಕಾರಿ ವೆಂಕಟೇಶ್, ಇನ್ಸ್‌ಪೆಕ್ಟರ್ ಬಿ.ಪಿ.ಮಂಜು, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಎಸ್.ಮಂಜುನಾಥ್ ಇದ್ದರು.