ಎಲ್ಲೆಡೆ ಗಾಂಧಿ, ಶಾಸ್ತ್ರೀಜಿ ಸ್ಮರಣೆ

| Published : Oct 03 2024, 01:28 AM IST

ಸಾರಾಂಶ

ಜಿಲ್ಲಾಡಳಿತ ಹಾಗೂ ಜಿಪಂ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲಾಡಳಿತ ಹಾಗೂ ಜಿಪಂ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ಇತರರು ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ವಿವಿಧ ಧರ್ಮದ ಗುರುಗಳಾದ ಸಂಸ್ಕೃತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಆಸೀಫ್ ಎಲ್. ಮುದಗಲ್ಲ ಕುರಾನ್‌ ಹಾಗೂ ಅಗ್ನೆಲ್ ಫಾದರ್ ಬೈಬಲ್ ಕುರಿತು ಪಠಣ ಮಾಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಂ.ತುಂಬರಮಟ್ಟಿ, ಎನ್.ಐಸಿಯ ಗಿರಿಯಾಚಾರ, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಸಂಗಮೇಶ ಸಣ್ಣತಂಗಿ ಕಾರ್ಯಕ್ರಮ ನಿರೂಪಿಸಿದರು.