ಗಾಂಧೀಜಿ, ಶಾಸ್ತ್ರೀಜಿ ಸ್ಮರಣೆ ಅಗತ್ಯ: ಚಿದಾನಂದ್ ಎಂ.ಗೌಡ

| Published : Oct 03 2025, 01:07 AM IST

ಸಾರಾಂಶ

ಮಹಾತ್ಮ ಗಾಂಧೀಜಿಯವರು ಅಹಿಂಸಾ ತತ್ವವನ್ನು ಜನತೆಗೆ ತಿಳಿಸಿ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಹಸಿರು ಕ್ರಾಂತಿ ಮಾಡಿ ದೇಶದಲ್ಲಿ ಆಹಾರ ಸಮಸ್ಯೆಗೆ ಪರಿಹಾರ ನೀಡಿದವರು. ಇಂತಹ ಮಹನೀಯರ ಜನ್ಮ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ವಿಶೇಷಚೇತನರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .

ಕನ್ನಡಪ್ರಭ ವಾರ್ತೆ ಶಿರಾ

ದೇಶದ ಸ್ವಾತಂತ್ರ್ಯಕ್ಕಾಗಿ ನಿರಂತರವಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರು ಹಾಗೂ ದೇಶದಲ್ಲಿ ಹಸಿರು ಕ್ರಾಂತಿಯನ್ನೇ ಮಾಡಿದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಅವರ ಹಾದಿಯಲ್ಲಿ ಸಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ನಗರದ ಸೇವಾ ಸದನದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾ ಜಿಲ್ಲೆ ವತಿಯಿಂದ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಸೇವಾ ಪಾಕ್ಷಿಕ ಅಭಿಯಾನದಲ್ಲಿ ದಿವ್ಯಾಂಗರಿಗೆ, ವಿಶೇಷ ಚೇತನರಿಗೆ ಸನ್ಮಾನಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರು ಅಹಿಂಸಾ ತತ್ವವನ್ನು ಜನತೆಗೆ ತಿಳಿಸಿ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಹಸಿರು ಕ್ರಾಂತಿ ಮಾಡಿ ದೇಶದಲ್ಲಿ ಆಹಾರ ಸಮಸ್ಯೆಗೆ ಪರಿಹಾರ ನೀಡಿದವರು. ಇಂತಹ ಮಹನೀಯರ ಜನ್ಮ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ವಿಶೇಷಚೇತನರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ನಗರಮಂಡಲ ಅಧ್ಯಕ್ಷರಾದ ಗಿರಿಧರ್, ಇಂಜಿನಿಯರ್ ಶ್ರೀನಿವಾಸ್ ಹಾಗೂ ಅಶ್ವತ್ಥ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಹಿರಿಯ ಮುಖಂಡರಾದ ಕುಮಾರ್ ಮಾಸ್ಟರ್, ರೈತ ಮೋರ್ಚಾ ಮೂಗನಹಳ್ಳಿ ರಾಮು, ಎಸ್.ಟಿ ಮೋರ್ಚಾ ಅಧ್ಯಕ್ಷರಾದ ತೇಜೇಶ್ವರ್, ಭೂತರಾಜು, ಸೈಯದ್ ಬಾಬಾ, ಶಶಿ ಕುಮಾರ್, ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.