ಹುತಾತ್ಮರ ಸ್ಮರಿಸಿಕೊಳ್ಳುವುದು ಪುಣ್ಯದ ಕೆಲಸ: ಪ್ರಭಾವತಿ

| Published : Sep 12 2025, 12:06 AM IST

ಹುತಾತ್ಮರ ಸ್ಮರಿಸಿಕೊಳ್ಳುವುದು ಪುಣ್ಯದ ಕೆಲಸ: ಪ್ರಭಾವತಿ
Share this Article
  • FB
  • TW
  • Linkdin
  • Email

ಸಾರಾಂಶ

ಅರಣ್ಯ ಸಿಬ್ಬಂದಿ ಅರಣ್ಯ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಾಣದ ಹಂಗು ತೊರೆದು ಕಳ್ಳರನ್ನು ಹಿಡಿದು ತಂದು ನ್ಯಾಯಾಲಯಕ್ಕೆ ಒಪ್ಪಿಸುವ ಕೆಲಸ ನಿರಂತರವಾಗಿ ನಡೆದಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗಾಗಿ ಹಗಲಿರುಳು ಕೆಲಸ ಮಾಡಿ ಕಾಡಿಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಹುತಾತ್ಮರರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿಲ್ಲಾ ನ್ಯಾಯಾಧೀಶರಾದ ಪ್ರಭಾವತಿ ಹೇಳಿದರು.ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದ ಅರಣ್ಯ ಹುತಾತ್ಮರ ಸ್ಮಾರಕದ ಬಳಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮರಿಗೆ ಗೌರವ ಸೂಚಿಸಿ ನಂತರ ಅವರು ಮಾತನಾಡಿದರು.ಅರಣ್ಯ ಸಿಬ್ಬಂದಿ ಅರಣ್ಯ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಾಣದ ಹಂಗು ತೊರೆದು ಕಳ್ಳರನ್ನು ಹಿಡಿದು ತಂದು ನ್ಯಾಯಾಲಯಕ್ಕೆ ಒಪ್ಪಿಸುವ ಕೆಲಸ ನಿರಂತರವಾಗಿ ನಡೆದಿದೆ. ಈ ಸಂದರ್ಭದಲ್ಲಿ ಕೆಲವರು ಹುತಾತ್ಮರಾಗಿದ್ದಾರೆ. ಪರಿಸರ ಚೆನ್ನಾಗಿರಬೇಕಾದರೆ ಕಾಡು, ವನ್ಯ ಜೀವಿಗಳು ಉಳಿಯಬೇಕು, ಇವುಗಳ ಉಳಿವಿಗಾಗಿ ಹಗಲಿರಲು ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯವಾದದು ಎಂದರು.

ಹಿಂದೆ ಯಾವ ಕಾನೂನು ಕಟ್ಟಲೆಗಳಿರಲಿಲ್ಲ. ಆ ಸಂದರ್ಭದಲ್ಲಿ ಕಾಡನ್ನು ಹಾಗೂ ವನ್ಯಜೀವಿಗಳನ್ನು ರಕ್ಷಿಸಿರುವ ಹುತಾತ್ಮರ ಕಾರ್ಯ ನಮಗೆ ಸ್ಪೂರ್ತಿಯಾಗಬೇಕು. ಈ ಕಾನೂನು ಕಟ್ಟಲೆಗಳು ಇವೆ, ಆದರೂ ಪಿ.ಶ್ರೀನಿವಾಸ್‌ರಂತಹ ಪ್ರಾಮಾಣಿಕ ಅಧಿಕಾರಿಗಳು ವೀರಪ್ಪನಂತಹ ಕಾಡುಗಳ್ಳರಿಂದ ಹತ್ಯೆಯಾಗಿದ್ದಾರೆ ಇದು ಅತ್ಯಂತ ವಿಷಾದನೀಯ ಎಂದರು.ಜಿಲ್ಲೆಯಲ್ಲಿ ಉತ್ತಮವಾದ ಕಾಡಿನ ಪರಿಸರವಿದ್ದು, ಇದಕ್ಕೆ ಅರಣ್ಯ ಸಿಬ್ಬಂದಿಯ ತ್ಯಾಗ ಬಲಿದಾನವೇ ಕಾರರಣ. ವನ್ಯಜೀವಿಗಳನ್ನು ಬೇಟೆಯಾಡುವುದು, ಮರಗಳನ್ನು ಕತ್ತರಿಸುವುದು ನಡೆಯುತ್ತಿದೆ ಇದು ಕಾನೂನು ಬಾಹಿರ, ಹುತಾತ್ಮರ ಸೇವೆಯನ್ನು ನಾವು ಸ್ಮರಿಸಬೇಕು. ಆ ಉದ್ದೇಶಕ್ಕಾಗಿ ರಾಷ್ಟ್ರೀಯವಾಗಿ ಹುತಾತ್ಮರ ದಿನ ಆಚರಿಸುತ್ತಿರುವುದ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಬಿಆರ್‌ಟಿ ಡಿಸಿಎಫ್ ಬಿ.ಎಸ್. ಶ್ರೀಪತಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಸೆ. 11 ರಂದು ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಲು ದೇಶಾದ್ಯಂತ ಆಚರಿಸಲಾಗುತ್ತದೆ ಎಂದರು.ಸೆ. 11, 1730ರಲ್ಲಿ ಕುಖ್ಯಾತ ಖೇಜರ್ಲಿ ಹತ್ಯಾಕಾಂಡ ನಡೆದ ದಿನ, ಅಂದಿನ ರಾಜಸ್ಥಾನದ ಮಹಾರಾಜ ಅಭಯ್ ಸಿಂಗ್ ಕಾಡಿನಲ್ಲಿರುವ ಖೇಜರ್ಲಿ ಮರಗಳನ್ನು ಕಡಿಯಲು ಆದೇಶ ನೀಡಿದರು. ಬಿಷ್ಣೋಯ್ ಸಮುದಾಯದ ಜನರು ಖೇಜರ್ಲಿ ಮರಗಳನ್ನು ಪವಿತ್ರವೆಂದು ಪರಿಗಣಿಸಿ ಆದೇಶದ ವಿರುದ್ಧ ಪ್ರತಿಭಟಿಸಿದರು. ಪ್ರತಿಭಟನೆಯ ಸಂಕೇತವಾಗಿ, ಅಮೃತಾ ದೇವಿ ಎಂಬ ಮಹಿಳೆ ಖೇಜರ್ಲಿ ಮರಗಳನ್ನು ಕಡಿಯದಂತೆ ರಕ್ಷಿಸಲು ತನ್ನ ತಲೆಯನ್ನು ಅರ್ಪಿಸಿದಳು. ಅಮೃತಾ ದೇವಿಯ ಶಿರಚ್ಛೇದ ಮಾಡಿದರು. ಅಂದು ಅಮೃತಾ ದೇವಿಯ ಚಿಕ್ಕ ಮಕ್ಕಳು ಸೇರಿದಂತೆ 350 ಕ್ಕೂ ಹೆಚ್ಚು ಜನರನ್ನು ಕೊಂದರು, ಈದಿನವನ್ನು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಎಂದು ಘೋಷಿಸಲಾಯಿತು ಎಂದರು.ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್.ಎನ್. ಮಂಜುನಾಥ ಅವರು 53 ಜನರ ಹುತಾತ್ಮರ ನಾಮವಾಚನ ಮಾಡಿದರು, ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಜಿ.ಪಂ. ಸಿಇಓ ಮೋನಾ ರಾವತ್, ಅಡಿಷನಲ್ ಎಸ್ಪಿ. ಶಶಿಧರ್ ಇತರರರು ಉಪಸ್ಥಿತರಿದ್ದರು.------11ಸಿಎಚ್‌ಎನ್51ಬಿಆರ್‌ಟಿ ವತಿಯಿಂದ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿದರು.----11ಸಿಎಚ್‌ಎನ್52ಚಾಮರಾಜನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದ ಅರಣ್ಯ ಹುತಾತ್ಮರ ಸ್ಮಾರಕದ ಬಳಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.

-----11ಸಿಎಚ್‌ಎನ್53ಬಿಆರ್‌ಟಿ ವತಿಯಿಂದ ಚಾಮರಾಜನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದ ಅರಣ್ಯ ಹುತಾತ್ಮರ ಸ್ಮಾರಕದ ಬಳ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಗಣ್ಯರು ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದರು.--------