ಸಾರಾಂಶ
ನಮ್ಮ ಹಿರಿಯರು ತ್ಯಾಗ-ಬಲಿದಾನದ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಪ್ರಾಣಾರ್ಪಣೆ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ತಮ್ಮ ಅಹಿಂಸಾ ಹೋರಾಟದ ಮೂಲಕ ವಿಶ್ವದಾದ್ಯತ ಸಂಚಲನ ಮೂಡಿಸುವ ಜೊತೆಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಶಸ್ವಿಯಾದ ಮಹಾತ್ಮ ಗಾಂಧೀಜಿ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತ್ಯಾಗ, ಬಲಿದಾನದ ಮೂಲಕ ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಹುತಾತ್ಮರನ್ನು ಸ್ಮರಿಸಿ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸುಧೀರ್ ಹೇಳಿದರು.ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಹಿರಿಯರು ತ್ಯಾಗ-ಬಲಿದಾನದ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಪ್ರಾಣಾರ್ಪಣೆ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ತಮ್ಮ ಅಹಿಂಸಾ ಹೋರಾಟದ ಮೂಲಕ ವಿಶ್ವದಾದ್ಯತ ಸಂಚಲನ ಮೂಡಿಸುವ ಜೊತೆಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಶಸ್ವಿಯಾದ ಮಹಾತ್ಮ ಗಾಂಧೀಜಿ ಅವರು ನಾಥುರಾಮ್ ಗೋಡ್ಸೆಯ ಬಂದೂಕಿನ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ಈ ದಿನದಂದು ದೇಶಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ದೇವರಾಜು, ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ನಾಗೇಗೌಡ, ಕಾರ್ಯದರ್ಶಿ ಮಂಜೇಗೌಡ, ಹಿರಿಯ ವಕೀಲರಾದ ರವಿಶಂಕರ್, ಎಚ್.ರವಿ, ಬಿ.ಎಲ್. ದೇವರಾಜು, ಜಿ.ಆರ್. ಅನಂತರಾಮಯ್ಯ, ನಿರಂಜನ, ರಾಜೇಗೌಡ, ಶಿಕ್ಷಕರಾದ ನೀಲಾಮಣಿ, ರಾಜಮ್ಮ, ಗೌರಮ್ಮ, ಸಿಡಿಪಿಓ ಅರುಣ್ ಕುಮಾರ್ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಅಭಿನಂದನೆಶ್ರೀರಂಗಪಟ್ಟಣ:
ಶ್ರೀರಂಗಪಟ್ಟಣ ಮಾರ್ಗವಾಗಿ ಸುತ್ತೂರು ಮಠಕ್ಕೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್, ಮುಖಂಡರಾದ ಇಂಡುವಾಳು ಸಚ್ಚಿದಾನಂದ ಸೇರಿದಂತೆ ಇತರರು ಹೂಗುಚ್ಚ ನೀಡಿ ಅಭಿನಂದಿಸಿದರು. ಪುರಸಭಾ ಸದಸ್ಯರಾದ ಗಂಜಾಂ ಶಿವು, ಎಸ್.ಟಿ. ರಾಜು, ಸಾಮಿಯಾನ ಪುಟ್ಟರಾಜು, ಚಂದನ್, ರಘು, ಚಂದ್ರು, ಪ್ರಭಾಕರ್ ಇದ್ದರು.