ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವುದರೊಂದಿಗೆ ಅವರ ಕನಸಿನ ಭಾರತವನ್ನು ಕಟ್ಟುವ ಸಂಕಲ್ಪ ಮಾಡಬೇಕು. ಸ್ವಚ್ಛ, ಸಬಲ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಗುರಿಯನ್ನು ಪ್ರತಿಯೊಬ್ಬರೂ ಹೊಂದಬೇಕು ಎಂದು ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.
ಕುಂದಾಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವುದರೊಂದಿಗೆ ಅವರ ಕನಸಿನ ಭಾರತವನ್ನು ಕಟ್ಟುವ ಸಂಕಲ್ಪ ಮಾಡಬೇಕು. ಸ್ವಚ್ಛ, ಸಬಲ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಗುರಿಯನ್ನು ಪ್ರತಿಯೊಬ್ಬರೂ ಹೊಂದಬೇಕು ಎಂದು ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಆವರಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಮಾಡಿದ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜತೆಗೆ, ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.ಸಂಘದ ನಿರ್ದೇಶಕರಾದ ಶ್ರೀನಿವಾಸ ಕುಂದರ್, ಮಂಜುನಾಥ್ ಕುಂದರ್, ರಾಜು ತೋಟದಬೆಟ್ಟು, ಅಣ್ಣಯ್ಯ ಪುತ್ರನ್, ಸುನಿಲ್ ಜಿ. ನಾಯ್ಕ, ಶೇಖರ್ ಅಂಕದಕಟ್ಟೆ, ವೆಂಕಟೇಶ ಪುತ್ರನ್, ಶಿವರಾಮ ಅಮೀನ್, ದಿನೇಶ್ ಮೆಂಡನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾಂಚನ್, ಸಿಬ್ಬಂ, ಗ್ರಾಮಸ್ಥರು ಇದ್ದರು.