ಸಾರಾಂಶ
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಅವರು ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಪಂಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.
ನನ್ನಿವಾಳ ಗ್ರಾಮ ಪಂಚಾಯಿತಿಗೆ ಜಿಪಂ ಸಿಇಒ ಭೇಟಿಕನ್ನಡಪ್ರಭ ವಾರ್ತೆ ಚಳ್ಳಕೆರೆ
ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿ ಅನುಸಾರ ಕೆಲಸ ನಿರ್ವಹಣೆ ಮಾಡಬೇಕು ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು. ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು.ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಪಂ ಭೇಟಿ ನೀಡಿ, ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಎನ್‍ಆರ್‌ಎಲ್‍ಎಂ ಶೆಡ್ , ಚರಂಡಿ, ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಟ್ಟಡ ಪರಿಶೀಲನೆ ನಡೆಸಿ ಮಾತನಾಡಿದರು.
ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಕಳಪೆಯಾದಲ್ಲಿ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಂಜಿನಿಯರ್‍ಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ನರೇಗಾ ಯೋಜನೆಯ ಕಡತಗಳು ಚೆಕ್‍ಲಿಸ್ಟ್ ಪ್ರಕಾರವೇ ನಿರ್ವಹಿಸಬೇಕು. ಇಲ್ಲಾವಾದಲ್ಲಿ ಪಿಡಿಒ ಅವರೇ ನೇರ ಜವಾಬ್ದಾರರು. ಪ್ರತಿ ಕಡತಗಳ ಪಾರದರ್ಶಕವಾಗಿ ನಿರ್ವಹಣೆ ಮಾಡಬೇಕು. ಲೆಕ್ಕ ಪತ್ರಗಳೂ ಕೂಡಾ ಸ್ಪಷ್ಟವಾಗಿರಬೇಕೆಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳೊಂದಿಗೆ ಮುಕ್ತ ಸಮಾಲೋಚನೆ ನಡೆಸಿ ಗ್ರಾಮಗಳ ಅಭಿವೃದ್ಧಿಗೆ ನಿಮ್ಮಗಳ ಪಾತ್ರ ಮಹತ್ವವಾದದ್ದು. ಆದುದರಿಂದ ಗ್ರಾಮ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಎಡಿಪಿಸಿ ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಹೆಚ್. ಶಶಿಧರ್, ನರೇಗಾ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ತಾಲೂಕಿನ ತಾಂತ್ರಿಕ ಸಂಯೋಜಕರು, ತಾಲೂಕು ಐಇಸಿ ಮತ್ತು ಎಂಐಎಸ್ ಸಂಯೋಜಕರು, ಗ್ರಾಮ ಪಂಚಾಯಿತಿ ತಾಂತ್ರಿಕ ಸಹಾಯಕರು, ಬಿಎಫ್‍ಟಿ ಮತ್ತು ಜಿ.ಕೆ.ಎಂ ಕರವಸೂಲಿಕಾರರು, ಗಣಕಯಂತ್ರ ನಿರ್ವಾಹಕರು ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.