ಮನೆ ಅಂಗಳದಲ್ಲಿ ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕು

| Published : Jul 10 2024, 12:30 AM IST

ಮನೆ ಅಂಗಳದಲ್ಲಿ ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಪರಿಸರಕ್ಕೆ ಪೂರಕವಾಗಿರುವ ತೆಂಗು, ಮಾವು, ನೇರಳೆ, ಹೊಂಗೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ಪೋಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಮುಂದಾಗಬೇಕು

- ತಾಯಿಗೊಂದು ಗಿಡ ಅಭಿಯಾನಕನ್ನಡಪ್ರಭ ವಾರ್ತೆ ಮೈಸೂರುವಾತಾವರಣ ಕಲುಷಿತವಾಗುತ್ತಿರುವ ಹಿನ್ನೆಲೆ ನಾಗರಿಕರು ಮನೆ ಅಂಗಳದಲ್ಲಿ ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕು ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷ ರೇಣುಕ ರಾಜ್ ಹೇಳಿದರು. ದಟ್ಟಗಳ್ಳಿಯಲ್ಲಿ ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಜನುಮದಿನ ಅಂಗವಾಗಿ ವಿವಿಧ ಜಾತಿಯ ಗಿಡ ನೆಟ್ಟಿ ಅವರು ಮಾತನಾಡಿದರು. ಪರಿಸರಕ್ಕೆ ಪೂರಕವಾಗಿರುವ ತೆಂಗು, ಮಾವು, ನೇರಳೆ, ಹೊಂಗೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ಪೋಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಮುಂದಾಗಬೇಕು ಎಂದರು.ಚಾಮುಂಡೇಶ್ವರಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಗೌಡ ಮಾತನಾಡಿ, ಪ್ರಧಾನಿ ಆಶಯದಂತೆ ತಮ್ಮ ತಾಯಿಯ ಜತೆಗೂಡಿ ಸಸಿ ನೆಡಲಾಗಿದೆ. ಪ್ರತಿಯೊಬ್ಬರು ಸಸಿ ನೆಟ್ಟು ಹೆತ್ತ ತಾಯಿಗೆ ಗೌರವ ಸಲ್ಲಿಸಬೇಕು ಎಂದರು.ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ರೇಣುಕಾ ರಾಜ್, ಚಾಮುಂಡೇಶ್ವರಿ ಗ್ರಾಮಾಂತರ ಅಧ್ಯಕ್ಷರಾದ ಪೈ. ಟಿ. ರವಿ, ಶ್ರೀನಿವಾಸ್, ಚಾಮುಂಡೇಶ್ವರಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷ ಸವಿತಾ ಗೌಡ, ಪ್ರಧಾನ ಕಾರ್ಯದರ್ಶಿ ಹೇಮಂತ್, ಸಂಚಾಲಕರಾದ ಸುನಿಲ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಮುನಾ ಕೃಷ್ಣಮೂರ್ತಿ, ಉಪಾಧ್ಯಕ್ಷರಾದ ಗೀತಾ ಪ್ರಸಾದ್, ಕೃಷ್ಣವೇಣಿ, ರೇಖಾ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಾಲಿನಿ, ರೈತ ಮೋರ್ಚಾ ಅಧ್ಯಕ್ಷರಾದ ರಾಧಾ, ಅನಿತಾ, ಶ್ರುತಿ, ಯಶೋದಾ ರಾಜು ಇದ್ದರು.