ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆಯ ಮೇರೆಗೆ ಸಿಹಿ ತಿಂಡಿ ತಿನಿಸು ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಆಹಾರೋದ್ಯಮಗಳ ಮೇಲೆ ಪರಿಶೀಲನೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ಮಂಗಳೂರು: ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆಯ ಮೇರೆಗೆ ಸಿಹಿ ತಿಂಡಿ ತಿನಿಸು ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಆಹಾರೋದ್ಯಮಗಳ ಮೇಲೆ ಪರಿಶೀಲನೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ಬೇಕರಿ ಆಹಾರ ಉತ್ಪನ್ನಗಳನ್ನು ರಿಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ನಗರದ ಫಳ್ನೀರ್ ಜಂಕ್ಷನ್‌ನಲ್ಲಿರುವ ಬೇಕರಿಯೊಂದರ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.ಆಹಾರದ ಪ್ಯಾಕೆಟ್‌ಗಳ ಮೇಲೆ ತಯಾರಿಕಾ ದಿನಾಂಕ, ಬಳಕೆಯ ಅವಧಿ ಮೀರುವ ದಿನಾಂಕ ಬ್ಯಾಚ್ ನಂಬರ್ ಎಫ್‌ಎಸ್ ಎಸ್ಎಐ ಲೈಸೆನ್ಸ್ ನಂಬರ್ ಇಲ್ಲದ ಆಹಾರ ಉತ್ಪನ್ನಗಳನ್ನು ಸೀಜ್ ಮಾಡಿ ಸೀಲ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.