ಸಾರಾಂಶ
ಹಿಜಾಬ್ ನಿಷೇಧದಿಂದ ಅನಗತ್ಯ ಸಂಘರ್ಷಗಳಾದರೇ ಸರ್ಕಾರ ನೇರಹೊಣೆ: ಯಶ್ಪಾಲ್
ಕನ್ನಡಪ್ರಭ ವಾರ್ತೆ ಉಡುಪಿ
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಜಾರಿಯಲ್ಲಿರುವ ಹಿಜಾಬ್ ನಿಷೇಧವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಪಡೆಯುವುದಾಗಿ ಹೇಳಿದ್ದಾರೆ. ಇದರಿಂದ ಅನಗತ್ಯ ಸಂಘರ್ಷಗಳಾದರೇ ಅವರೇ ನೇರಹೊಣೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಎಚ್ಚರಿಸಿದ್ದಾರೆ.ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ರದ್ದು ಆದೇಶ ಇನ್ನು ಕೈ ಸೇರಿಲ್ಲ, ಕೈ ಸೇರಿದ ನಂತರ ಸೂಕ್ತ ಉತ್ತರ ನೀಡುತ್ತೇವೆ. ಒಂದು ವೇಳೆ ಹಿಜಾಬ್ ನಿಷೇಧ ವಾಪಸ್ ಪಡೆದರೆ ಅವರು ಜೇನುಗೂಡಿಗೆ ಕೈ ಹಾಕಿದಂತೆ, ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಅವರು ಹೇಳಿದರು.
ಶಾಲೆಗಳಲ್ಲಿ ಭೇದಭಾವ ಇರಬಾರದು, ಜಾತಿ ಮತ ಭೇದ ಇಲ್ಲದೇ ಶಿಕ್ಷಣ ಪಡೆಯಬೇಕು ಎಂಬ ದೃಷ್ಟಿಯಲ್ಲಿ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧ ನಿರ್ಧಾರ ಕೈಗೊಂಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟು ತಪ್ಪು ಮಾಡುತ್ತಿದೆ. ರಾಜ್ಯ ಸರ್ಕಾರ ಗೊಂದಲದಲ್ಲಿದೆ, ಆಂಧ್ರ ಚುನಾವಣೆಯಲ್ಲಿ ವಿಧಾನಸಭೆಯ ಸ್ವೀಕರ್ ಬಗ್ಗೆ ಜಮೀರ್ ಮಾತನಾಡಿದ್ದು, ಮುಖ್ಯಮಂತ್ರಿ ಐಷಾರಾಮಿ ಖಾಸಗಿ ವಿಮಾನದಲ್ಲಿ ತಿರುಗಾಡಿದ್ದು ವಿವಾದವಾಗಿದೆ. ಈಗ ತನ್ನ ತಪ್ಪನ್ನು ಮರೆಮಾಚಿ, ಜನರ ದಾರಿ ತಪ್ಪಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದವರು ಹೇಳಿದರು.ಸರ್ಕಾರದ ನಿರ್ಧಾರದ ವಿರುದ್ಧ ಅಗತ್ಯವಿದ್ದರೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲು ನನಗೆ ಅವಕಾಶ ಇದೆ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಕ್ರಮ ಕ್ಗೊಳ್ಳುತ್ತೇನೆ ಎಂದಿದ್ದಾರೆ.ಅತಿರೇಕದ ಪರಮಾವಧಿ: ಉದಯಕುಮಾರ್ ಶೆಟ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಜಾಬ್ ನಿಷೇಧ ಹಿoಪಡೆಯುತ್ತೇನೆ ಎನ್ನುವ ಹೇಳಿಕೆ ಅತಿರೇಕದ ಪರಮಾವಧಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡ ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆಗೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳಿಲ್ಲ. ಅದಕ್ಕೆ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಅಧ್ಯಾಯವನ್ನು ಬೇಕಂತಲೇ ಕೆದಕಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸುವ ಹುನ್ನಾರಕ್ಕೆ ಸಿ.ಎಂ. ಮುಂದಾದಂತೆ ಕಾಣುತ್ತಿದೆ ಎಂದವರು ಆರೋಪಿಸಿದ್ದಾರೆಜನತೆಯ ಗಮನ ಬೇರೆಡೆ ಸೆಳೆಯುವ ಪ್ರಯತ್ನ: ಕುಯಿಲಾಡಿಒಂದೇ ವರ್ಗದ ಓಲೈಕೆ ತನ್ನ ಜನ್ಮಸಿದ್ಧ ಹಕ್ಕು ಎಂಬಂತೆ ವರ್ತಿಸುತ್ತಿರುವ ಸಿ.ಎಂ. ಸಿದ್ದರಾಮಯ್ಯ ಅವರ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಹೇಳಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.