ಸಾರಾಂಶ
ರಾಮನಗರ: ನಗರದ ಡಿಸಿ ಕಚೇರಿ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ನಿಮಿತ್ತ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯರವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ರಾಮನಗರ: ನಗರದ ಡಿಸಿ ಕಚೇರಿ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ನಿಮಿತ್ತ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯರವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಆನಂತರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕನ್ನಡದ ಮೊದಲನೇ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕಿ ರಮ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಸಹಾಯಕ ನಿರ್ದೇಶಕ ರಮೇಶ್ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರವಿ ಕುಮಾರ್, ಜಿಲ್ಲಾಧಿಕಾರಿ ಕಚೇರಿ ಸಹಾಯಕ ವಿಶ್ವನಾಥ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.1ಕೆಆರ್ ಎಂಎನ್ 5.ಜೆಪಿಜಿ
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕನ್ನಡದ ಮೊದಲನೇ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅನಾವರಣಗೊಳಿಸಿದರು.