ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಗಣರಾಜ್ಯೋತ್ಸವ

| Published : Jan 27 2025, 12:45 AM IST

ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಗಣರಾಜ್ಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 76ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಉದ್ಯಾವರ

ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 76ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತ ರಾಷ್ಟ್ರದ ಸಂವಿಧಾನದಂತೆಯೇ ನಮ್ಮ ಶಿಕ್ಷಣ ಸಂಸ್ಥೆಯ ಸಾಂವಿಧಾನಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ನುಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮುಖ್ಯಾಧಿಕಾರಿ ಡಾ. ವೀರಕುಮಾರ ಕೆ., ಕಾಲೇಜಿನ ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ. ಎನ್., ಕಮ್ಯೂನಿಟಿ ಸರ್ವಿಸ್ ಕಮಿಟಿಯ ಮುಖ್ಯಸ್ಥರಾದ ಡಾ. ವಿದ್ಯಾಲಕ್ಷ್ಮಿ ಕೆ., ಬೋಧಕ, ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಂಸ್ಥೆಯ ದೈಹಿಕ ಶಿಕ್ಷಕ ಆದರ್ಶ್ ಶೆಟ್ಟಿ ಅವರು ಧ್ವಜಾರೋಹಣ ಮತ್ತು ಧ್ವಜವಂದನಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಸಂಘದ ನಾಯಕ ಶ್ರೀ ಗುರುಗೋವಿಂದ್ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಹಕರಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಶ್ರೀನಿಧಿ ಧನ್ಯ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಹರ್ಷ ಹಿರೇಮಟ್ ಅವರು ಸ್ವಾಗತಿಸಿ, ಸುಶ್ಮಿತ ಬಬಲೇಶ್ವರ್ ಅವರು ವಂದಿಸಿ, ಅತುಲ್ಯ ಆಚಾರ್ಯ ಅವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಕಾಲೇಜಿನ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಾಯನ ನಡೆಯಿತು.