ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ

ಪುತ್ತೂರು: ಆಧುನಿಕತೆಯ ಭರಾಟೆಯಲ್ಲಿ ಇಂದಿನ ಯುವಜನತೆ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆನೋ ಎನ್ನುವ ಭೀತಿ ಕಾಡುತ್ತಿದೆ. ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯಿಂದ ಗುರುಹಿರಿಯರಲ್ಲಿ ಭಕ್ತಿ ಗೌರವಗಳು ಕಡಿಮೆಯಾಗುತ್ತಿದ್ದು, ಸ್ವೇಚ್ಚಾಚಾರಗಳು ಹೆಚ್ಚುತ್ತಿವೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ ಡಿ. ಕಲ್ಲಾಜೆ ಹೇಳಿದರು ಸೋಮವಾರ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತನಾಡಿದರು.

ಪ್ರಜೆಗಳಿಗೆ ಸಮಾನ ಅಧಿಕಾರವನ್ನು ನೀಡುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವದಲ್ಲೇ ಅತಿ ಶ್ರೇಷ್ಟವಾದುದು. ಆದರೆ ದೇಶದ ರಾಜಕೀಯ ಮೇಲಾಟಗಳಿಂದ ಈ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಉಂಟಾಗಿದ್ದು, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಾವು ಹೆಣಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದರು.

ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಆಶ್ಲೆ ಡಿಸೋಜ ದೇಶದ ಸಂವಿಧಾನದ ಆಶಯಗಳು ಮತ್ತು ಅದನ್ನು ಅನುಸರಿಸಬೇಕಾದ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು.ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವಾಸ್ ಶೆಣೈ, ಪ್ರಾಂಶುಪಾಲ ಡಾ. ಮಹೇಶ್‌ ಪ್ರಸನ್ನ ಕೆ. ಮತ್ತುಕಾರ್‍ಯಕ್ರಮ ಸಂಯೋಜಕ ಬಾಲಚಂದ್ರ ಗೌಡ ಭಾರ್ತಿಕುಮೇರು ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.ವಿದ್ಯಾರ್ಥಿನಿಯರಾದ ದೀಪಶ್ರಿ, ಸನ್ಮಯ, ಅನೂಶಾ, ಆಕಾಂಕ್ಷಾ ಮತ್ತು ಶ್ರೀಮಾ ಪ್ರಾರ್ಥಿಸಿದರು. ಪ್ರಾಂಶುಪಾಲ ಡಾ. ಮಹೇಶ್‌ಪ್ರಸನ್ನ ಕೆ. ವಂದಿಸಿದರು. ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್ ಡಿ. ಸ್ವಾಗತಿಸಿದರು.