ಸಾರಾಂಶ
ತರೀಕೆರೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ತರೀಕೆರೆಇಂದು ಪ್ರತಿಯೊಬ್ಬ ಭಾರತೀಯರು ಬಹಳ ಸಡಗರ ಹಾಗೂ ಸಂಭ್ರಮದಿಂದ ದೇಶದಾದ್ಯಂತ ಸಂವಿಧಾನ ಜಾರಿಗೆ ಬಂದ ದಿನದ ಸವಿನೆನಪಿಗಾಗಿ ಗಣರಾಜ್ಯೋತ್ಸವನ್ನು ಆಚರಿಸುತ್ತಿದ್ದೇವೆ ಎಂದು ತಹಸೀಲ್ದಾರ್ ವಿಶ್ವಜೇತ ಮೇಹತಾ ಹೇಳಿದರು.
ಭಾನುವಾರ ತಾಲೂಕು ಅಡಳಿತ, ತಾಲೂಕು ಪಂಚಾಯಿತಿ, ಪುರಸಭೆ ತರೀಕೆರೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಯಲು ರಂಗಮಂದಿರದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ವಿವಿಧ ದೇಶ ವಿದೇಶಗಳಲ್ಲಿ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹಾಗೂ ದೇಶದ ಆಡಳಿತಕ್ಕೆ ಅಗತ್ಯವಾದ ಅಂಶಗಳನ್ನು ಆಯ್ದುಕೊಂಡು ದೊಡ್ಡ ಸಂವಿಧಾನ ರಚಿಸಿದ್ದಾರೆ. ಭಾರತದ ಪ್ರಜೆಗಳಾದ ನಾವು ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಮಕ್ಕಳೆಂದು ಸಂಭ್ರಮಿಸಬೇಕು ಎಂದು ಹೇಳಿದರು.ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ ಮಾತನಾಡಿ ಸಂವಿಧಾನ ಜಾರಿಗೆ ಬಂದ ಮಹತ್ವದ ದಿನವಾಗಿದೆ. ಸ್ವಾತಂತ್ರ್ಯ, ಸಮಾನತೆ ರಾಷ್ಟ್ರೀಯ ಹಬ್ಬಗಳು ಐಕ್ಯತೆಯನ್ನು ತೋರಿಸುತ್ತದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಮಾತನಾಡಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಶುಭಾಷಯ ಕೋರಿದರು.ಸಾಧಕರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂತಪ್ಪ ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ, ಗ್ರೇಡ್-2 ತಹಸೀಲ್ದಾರ್ ನೂರುಲ್ ಉದಾ, ಎಸಿಎಫ್ ಉಮ್ಮರ್ ಪಾಷ, ಪುರಸಭೆ ಮುಖ್ಯಾಧಿಕಾರಿ ಎಚ್. ಪ್ರಶಾಂತ್ ಪುರಸಭೆ ಸದಸ್ಯರು, ಪುರಸಭೆ ನಾಮಿನಿ ಸದಸ್ಯರು, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
26ಕೆಟಿಆರ್.ಕೆ.1ಃತರೀಕೆರೆಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ವಿಶ್ವಜೇತ ಮೇಹತಾ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮತ್ತಿತರರು ಇದ್ದರು.