ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಅದ್ಧೂರಿಯಾಗಿ

ಗುಡ್ಡೆಹೊಸೂರು: ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಆರ್.ನಾಗೇಂದ್ರ ನೆರವೇರಿಸಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಕೆ.ಕೆ.ಶೇಷಮ್ಮ ಮತ್ತು ಲಲಿತಾಸುಬ್ಬಯ್ಯ ಗೌಡ ಅವರು ಉಪಸ್ಥಿತರಿದ್ದರು. ಇದೇ ಸಂಧರ್ಭ ಸಾರ್ವಜನಿಕರಿಗೆ ವಿವಿಧ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಆರ್.ನಾಗೇಂದ್ರ ಅವರು ವಹಿಸಿದ್ದರು. ಕಾರ್ಯಕ್ರಮ ಉದ್ಘಾಟನೆಯನ್ನು ಗ್ರಾಮಪಂಚಾಯ್ತಿ ಅಧ್ಯಕ್ಷರಾದ ಸೌಮ್ಯ ಭರತ್‌ ನಡೆಸಿದರು. ಮುಖ್ಯಭಾಷಣಕಾರರಾಗಿ ನಿವೃತ್ತ ಕಲಾ ಶಿಕ್ಷಕರಾದ ಉ.ರಾ.ನಾಗೇಶ್‌ ಹಾಜರಿದ್ದು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ದತ್ತಿ ನಿಧಿ ಸ್ಥಾಪಕರಾದ ಆಮೆಮನೆ ಪಾರ್ವತಿ ಹಾಜರಿದ್ದರು. ಅಲ್ಲದೆ ಮಾಜಿ ಅಧ್ಯಕ್ಷರಾದ ಕೆ.ಎನ್.ಚಂದ್ರಶೇಖರ್‌, ಬಿ.ಎಸ್.ಧನಪಾಲ್‌, ಗ್ರಾ,ಪಂ.ಸದಸ್ಯ ನಾರಾಯಣ. ಮುಂತಾದವರು ಹಾಜರಿದ್ದರು. ಸಂಜೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ಶಾಲೆಯಿಂದ ವರ್ಗವಣೆ ಗೊಂಡ ಮುಖ್ಯಶಿಕ್ಷಕರಾದ ಕೆ.ಎಸ್.ಸಣ್ಣಸ್ವಾಮಿ ವೇದಿಕೆಯಲ್ಲಿದ್ದರು. ಮಕ್ಕಳ ಮನರಂಜನೆ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಮಂದಿ ಗ್ರಾಮಸ್ಥರು ಹಾಜರಿದ್ದರು. ಮುಖ್ಯಶಿಕ್ಷಕಿ ಎಚ್. ಎಸ್. ಭಾಗ್ಯ ಸ್ವಾಗತಿಸಿದರು. ಶಿಕ್ಷಕಿ ಯಶುಮತಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರಾದ ಬಿ.ಕೆ.ಚಂದ್ರಶೇಖರ್‌ ವಂದಿಸಿದರು. ಶಿಕ್ಷಕಿಯರಾದ ರುಕ್ಮೀಣಿ, ಗೀತಾ, ಯೋಗಮಣಿ ಹಾಜರಿದ್ದರು. ಈ ಸಂದರ್ಭ ಎಸ್.ಡಿ.ಎಂ.ಸಿ ಯ ಎಲ್ಲ ಸದಸ್ಯರು ಹಾಜರಿದ್ದರು.