ಎಸ್ಆರ್‌ಎಸ್‌ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

| Published : Jan 28 2024, 01:16 AM IST

ಎಸ್ಆರ್‌ಎಸ್‌ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನದ ಎಸ್‌ಆರ್‌ಎಸ್‌ ಪ್ರಜ್ಞಾ ವಿದ್ಯಾಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ರಾಜಗೋಪಾಲ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಪ್ರೌಢಶಾಲೆಯ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆ ಸಲ್ಲಿಸಿದರು.

ಸಂಸ್ಥೆಯ ಅಧ್ಯಕ್ಷ ರಾಜಗೋಪಾಲ ಶೆಟ್ಟಿ ಧ್ವಜಾರೋಹಣ

ಕನ್ನಡಪ್ರಭ ವಾರ್ತೆ ಹಾಸನ

ನಗರದ ಎಸ್‌ಆರ್‌ಎಸ್‌ ಪ್ರಜ್ಞಾ ವಿದ್ಯಾಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ರಾಜಗೋಪಾಲ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಪ್ರೌಢಶಾಲೆಯ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆ ಸಲ್ಲಿಸಿದರು. ನಂತರ ಸಂಸ್ಥೆಯ ಅಧ್ಯಕ್ಷರು ಮಾತನಾಡಿ, ಪ್ರತಿ ವರ್ಷದ ಜ.೨೬ ರಂದು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತೇವೆ. ಭಾರತೀಯ ಸಂವಿಧಾನ ಜಾರಿಗೆ ಬಂದದ್ದು ೧೯೫೦, ಜ.೨೬ ರಂದು. ಇದರ ಸವಿ ನೆನಪಿಗಾಗಿ ಪ್ರತೀ ವರ್ಷ ಈ ದಿನಾಂಕವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಿಸುತ್ತಿದ್ದೇವೆ ಎಂದುಇ ಹೇಳಿದರು.

೧೯೪೭, ಆಗಸ್ಟ್ ೧೫ ರಂದು ಭಾರತ ಸ್ವಾತಂತ್ರ್ಯವಾದ ನಂತರ ಆಗಸ್ಟ್ ೨೯ ರಂದು ಡಾ. ಬಿ. ಆರ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚನೆಗಾಗಿ ಕರಡು ಸಮಿತಿಯನ್ನು ರಚಿಸಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ಸಿದ್ಧಪಡಿಸಿ ೧೯೪೭ನೇ, ನವೆಂಬರ್ ೪ ರಂದು ಶಾಸನಸಭೆಯಲ್ಲಿ ಮಂಡಿಸಿತು. ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ೧೯೫೦, ಜ.೨೬ ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತ ದೇಶಕ್ಕೆ ತನ್ನದೇ ಆದ ಇತಿಹಾಸ, ವೈಭವ, ಪರಂಪರೆ ಹಾಗೂ ಹಿರಿಮೆ ಇದ್ದು ಅದರ ಅರಿವು ಇರಬೇಕಾದದ್ದು ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ದೇಶಪ್ರೇಮ, ರಾಷ್ಟ್ರಾಭಿಮಾನ ಹಾಗೂ ಸಂವಿಧಾನದ ಮೇಲೆ ಗೌರವ ಬೆಳಸಿಕೊಂಡು ಉತ್ತಮ ಪ್ರಜೆಗಳಾಗಿ ಭಾರತ ದೇಶವನ್ನು ಮುನ್ನಡೆಸಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ದೇಶಭಕ್ತಿ, ರಾಷ್ಟ್ರಾಭಿಮಾನ ಮತ್ತು ಸಾರ್ವಭೌಮತೆಯನ್ನು ಬಿಂಬಿಸುವಂತಹ ಪಥ ಸಂಚಲನ, ಸಂಗೀತ, ಸಮೂಹ ನೃತ್ಯಗಳು, ಸಮೂಹ ಗಾಯನ, ದೈಹಿಕ ವ್ಯಾಯಾಮಗಳು, ವಿವಿಧ ಸಾಮೂಹಿಕ ಕವಾಯತುಗಳು, ಭಾಷಣಗಳು ಹಾಗೂ ಇತರೆ ಸಾಂಸ್ಕೃತಿಕ ಕಾರ್‍ಯಕ್ರಮಗಳ ಜರುಗಿದವು.

ಸಂಸ್ಥೆಯ ಕಾರ್ಯದರ್ಶಿ ನಟರಾಜ್.ಎಂ,, ಸಂಸ್ಥೆಯ ಟ್ರಸ್ಟಿ ಆಶಾ ನಟರಾಜ್., ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.ಹಾಸನ ನಗರದ ಎಸ್‌ಆರ್‌ಎಸ್ ಶಾಲೆಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.