ಪ್ರತಿ ವರ್ಷದಂತೆ ಈ ಬಾರಿಯೂ ನಗರದ ನೆಹರೂ ಮೈದಾನದಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ವಿಜೃಂಭಣೆಯಿಂದ ನಡೆಯಲು ಅಗತ್ಯ ಸಿದ್ಧತೆಗಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ
ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ನಗರದ ನೆಹರೂ ಮೈದಾನದಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ವಿಜೃಂಭಣೆಯಿಂದ ನಡೆಯಲು ಅಗತ್ಯ ಸಿದ್ಧತೆಗಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಧ್ವಜಾರೋಹಣ ಸ್ಥಳ ನಿಗದಿ ಮಾಡಬೇಕು. ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಸಮಾವೇಶ, ಪರೇಡ್ ವೀಕ್ಷಣೆ, ಸಚಿವರಿಂದ ಗಣರಾಜ್ಯೋತ್ಸವ ಸಂದೇಶ, ಪಥ ಸಂಚಲನ, ಪ್ರಶಸ್ತಿ ವಿಸ್ತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವ್ಯವಸ್ಥಿತವಾಗಿ ಗಣರಾಜ್ಯೋತ್ಸವ ಆಚರಿಸಲು ಅಗತ್ಯ ಸಿದ್ಧತೆಗೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.ಎಲ್ಲ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯಾಯಾ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಚಿಕಿತ್ಸೆ ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಹೆಚ್ಚುವರಿ ಪೊಲೀಸ್ ಆಧೀಕ್ಷಕ ಅನಿಲ್ ಕುಮಾರ್ ಮತ್ತಿತರರು ಇದ್ದರು.