ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಉಪ ಸಮಿತಿಗಳು ವಹಿಸಿರುವ ಜವಾಬ್ದಾರಿ ಪಾಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಉಪ ಸಮಿತಿಗಳು ವಹಿಸಿರುವ ಜವಾಬ್ದಾರಿ ಪಾಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣರಾಜ್ಯೋತ್ಸವವನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಮಾಹಿತಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಶಾಲೆಗಳ ವಿವರ ತಿಳಿಸಬೇಕು. ಶಾಲೆಯಲ್ಲಿಯೇ ಅಗತ್ಯ ತರಬೇತಿ ಪಡೆದು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ವಿವಿಧ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ಜ.14 ರೊಳಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಪ್ರಶಸ್ತಿ ವಿತರಣೆ ಇದ್ದಲ್ಲಿ 16 ರೊಳಗೆ ಮಾಹಿತಿ ನೀಡುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಜ 21 ರೊಳಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಈ ಸಂಬಂಧ ಅಗತ್ಯ ಸಿದ್ಧತೆಯನ್ನು ಶಾಲೆಯಲ್ಲಿಯೇ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಮೈದಾನದ ಮಧ್ಯಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಶಬ್ಧ ಚಿತ್ರ ಸಂಬಂಧ ಗಮನಹರಿಸಲಾಗುವುದು ಎಂದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಅವರು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸಲಾಗುವುದು. ಈ ಸಂಬಂಧ ರಿಹರ್ಸಲ್ ನಡೆಸಲಾಗುವುದು ಎಂದು ಹೇಳಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಸೀಲ್ದಾರ್ ಶ್ರೀಧರ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಜಿ.ಕೆ.ನಾಯಕ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್, ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಎಂಜಿನಿಯರ್ ಪ್ರಭು, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಮ್ಮಿ ಸ್ವಿಕ್ವೇರಾ, ಭೂದಾಖಲೆಗಳ ಉಪನಿರ್ದೇಶಕ ನಿರಂಜನ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.