ಹುಕ್ಕೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

| Published : Jan 27 2024, 01:24 AM IST

ಸಾರಾಂಶ

ಆವಜೀಕರ ಆಶ್ರಮದ ಅಭಿನವ ಮಂಜುನಾಥ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರತಿಭಾವಂತ ಮಕ್ಕಳು ಮತ್ತು ಗಣರಾಜ್ಯೋತ್ಸವ ವಿಶೇಷ ಕಾರ್ಯಕ್ರಮದ ವಿಜೇತರಿಗೆ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಕನ್ನಡಪ್ರಭ ವಾರ್ತೆ ಹುಕ್ಕೇರಿಇತ್ತೀಚಿನ ದಿನಗಳಲ್ಲಿ ಜಾತಿಯ ವಿಷ ಬೀಜ ಬಿತ್ತುವ ಕೆಲಸ ದೇಶದಲ್ಲಿ ಹೆಚ್ಚಾಗುತ್ತಿದೆ. ಯುವಜನಾಂಗ ಇದನ್ನು ಮೆಟ್ಟಿ ನಿಂತು ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.ಸ್ಥಳೀಯ ಎಸ್.ಕೆ.ಹೈಸ್ಕೂಲ್ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ಶುಕ್ರವಾರ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ರಾಜಕೀಯ ಜಾತಿಯತೆಯಿಂದ ಕೂಡಿದೆ. ಇದು ದೇಶದ ಪ್ರಗತಿಗೆ ಮಾರಕವಾಗಿದೆ. ಪ್ರಜ್ಞಾವಂತ ಯುವಜನಾಂಗ ಇಂತಹ ವಿಷಬೀಜವನ್ನು ಧಿಕ್ಕರಿಸಿ ಕೇವಲ ಅಭಿವೃದ್ಧಿಗೆ ಶ್ರಮಿಸಬೇಕು. ಜಾತಿಯ ಮೀಸಲಾತಿ ಬದಲಾಗಿ ಆರ್ಥಿಕವಾಗಿ ಹಿಂದುಳಿದವರನ್ನು ಸಬಲರನ್ನಾಗಿ ಮಾಡುವಂತಹ ಯೋಜನೆಗಳನ್ನು ರೂಪಿಸಬೇಕು ಎಂದರು.ಧ್ವಜಾರೋಹಣ ನೆರವೇರಿಸಿದ ತಹಶಿಲ್ದಾರ ಮಂಜುಳಾ ನಾಯಕ ಮಾತನಾಡಿ, ನಮ್ಮ ದೇಶದ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಕಂಡು ಇತರ ದೇಶಗಳು ಅಚ್ಚರಿ ಪಡುವಂತಾಗಿದೆ ಎಂದರು.ಆವಜೀಕರ ಆಶ್ರಮದ ಅಭಿನವ ಮಂಜುನಾಥ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರತಿಭಾವಂತ ಮಕ್ಕಳು ಮತ್ತು ಗಣರಾಜ್ಯೋತ್ಸವ ವಿಶೇಷ ಕಾರ್ಯಕ್ರಮದ ವಿಜೇತರಿಗೆ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.ತಾಪಂ ಇಒ ಪ್ರವೀಣ ಕಟ್ಟಿ, ಗ್ರೇಡ್-2 ತಹಸೀಲ್ದಾರ ಪ್ರಕಾಶ ಕಲ್ಲೋಳಿ, ಸಿಪಿಐ ಮಹಾಂತೇಶ ಬಸ್ಸಾಪೂರ, ಪುರಸಭೆ ಮುಖ್ಯಾಧಿಕಾರಿ ಕಿಶೋರ ಬೆಣ್ಣಿ, ವಲಯ ಅರಣ್ಯಾಧಿಕಾರಿಗಳಾದ ಪ್ರಸನ್ನ ಬೆಲ್ಲದ, ಮಹಾಂತೇಶ ಸಜ್ಜನ, ಪುರಸಭೆ ಸದಸ್ಯರಾದ ರಾಜು ಮುನ್ನೋಳಿ, ಭೀಮಶಿ ಗೋರಖನಾಥ, ರಾಜು ಕುರಂದವಾಡೆ, ಮುಖಂಡರಾದ ಸುಭಾಷ ನಾಯಿಕ, ಎಸ್.ನಂಜುಂಡಪ್ಪ, ಬಿಆರ್‌ಸಿ ಎ.ಎಸ್.ಪದ್ಮನ್ನವರ, ಚುನಾವಣಾ ವಿಭಾಗದ ಸಂತೋಷ ನಾಯಕರ ಮತ್ತಿತರರು ಇದ್ದರು. ಬಿಇಒ ಪ್ರಭಾವತಿ ಪಾಟೀಲ ಸ್ವಾಗತಿಸಿದರು. ಎಸ್.ಆರ್.ಘಸ್ತಿ ನಿರೂಪಿಸಿದರು.