ಪ್ರಜಾಪ್ರಭುತ್ವದ ದಿನಾಚರಣೆಯನ್ನು ಆಚರಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯದ ಪುನರ್‌ವಿಮರ್ಷೆಯಾಗಿದೆ. ಕಳೆದ ೧೮ ವರ್ಷಗಳಿಂದ ಜಗತ್ತಿನಾದ್ಯಂತ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ನಾವೆಲ್ಲರೂ ಹುಟ್ಟುವಾಗಲೇ ಈ ದೇಶದ ಪ್ರಜೆಗಳಾಗಿ ಹುಟ್ಟುತ್ತೇವೆ ಎಂದು ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು.

ಪುತ್ತೂರು: ಪ್ರಜಾಪ್ರಭುತ್ವದ ದಿನಾಚರಣೆಯನ್ನು ಆಚರಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯದ ಪುನರ್‌ವಿಮರ್ಷೆಯಾಗಿದೆ. ಕಳೆದ ೧೮ ವರ್ಷಗಳಿಂದ ಜಗತ್ತಿನಾದ್ಯಂತ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ನಾವೆಲ್ಲರೂ ಹುಟ್ಟುವಾಗಲೇ ಈ ದೇಶದ ಪ್ರಜೆಗಳಾಗಿ ಹುಟ್ಟುತ್ತೇವೆ ಎಂದು ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು.

ಅವರು ಮಂಗಳವಾರ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಆಡಳಿತ, ತಾ.ಪಂ., ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಸಂವಿಧಾನವನ್ನು ಅಧ್ಯಯನ ಮಾಡುವುದರಿಂದ ನಮ್ಮ ಕರ್ತವ್ಯಗಳು, ಹಕ್ಕುಗಳ ಕುರಿತು ತಿಳಿಯುವುದಕ್ಕೆ ಸಾಧ್ಯವಿದ್ದು, ಯಾರೂ ಕೂಡ ಮುಂದಿನ ಪ್ರಜೆಗಳಲ್ಲ, ಪ್ರತಿಯೊಬ್ಬರು ಕೂಡ ಹುಟ್ಟುತ್ತಲೇ ಭಾರತೀಯ ಪ್ರಜೆಗಳು ಎಂಬ ಸತ್ಯವನ್ನು ನಾವು ಅರಿಯಬೇಕಾಗಿದೆ. ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ದೇಶದ ಸಮಾನತೆ ಹಕ್ಕನ್ನು ಅರಿತುಕೊಳ್ಳುವುದು ಅಗತ್ಯ. ಈ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ನಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.

ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಕೆ. ಮಾತನಾಡಿ ನಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ಪಾಲಿಸಿದಾಗ ನಮ್ಮ ಹಕ್ಕುಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಕರ್ತವ್ಯ ನಿಭಾಯಿಸುವುದೇ ದೇಶ ಸೇವೆಯಾಗಿದೆ ಎಂದರು.

ವೇದಿಕೆಯಲ್ಲಿ ಪುತ್ತೂರು ತಾಲೂಕು ಕಚೇರಿ ಉಪತಹಶೀಲ್ದಾರ್ ರವಿಕುಮಾರ್, ಅಕ್ಷಯ ದಾಸೋಹ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಪುತ್ತೂರು ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟೀಫನ್, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು. ಪ್ಯಾನಲ್ ನ್ಯಾಯವಾದಿ ಚಂದ್ರಾವತಿ ಉಪನ್ಯಾಸ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು

ವಕೀಲರ ಸಂಘದ ಆಶ್ರಯದಲ್ಲಿ ಕಾನೂನು ಮಾಹಿತಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಸತಿ ಶಾಲೆ ಉಪ್ಪಿನಂಗಡಿ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಸತೀಶ್ ಕುಮಾರ್ ಸಂವಿಧಾನ ಪೀಠಿಕೆ ವಾಚಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗೇಶ್ ಪಾಟಾಳಿ ಸ್ವಾಗತಿಸಿದರು.