ದೊಡ್ಡಬಳ್ಳಾಪುರ: ಗಣರಾಜ್ಯೋತ್ಸವ ಪ್ರತಿಯೊಬ್ಬ‌ ಭಾರತೀಯರ ಅಭಿಮಾನದ ದಿನಾಚರಣೆಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ನಿಜವಾದ ಅಸ್ತಿತ್ವ ಸ್ಥಾಪನೆಯಾದ ದಿನ ಇದಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕವಾಗಿ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದರು

ದೊಡ್ಡಬಳ್ಳಾಪುರ: ಗಣರಾಜ್ಯೋತ್ಸವ ಪ್ರತಿಯೊಬ್ಬ‌ ಭಾರತೀಯರ ಅಭಿಮಾನದ ದಿನಾಚರಣೆಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ನಿಜವಾದ ಅಸ್ತಿತ್ವ ಸ್ಥಾಪನೆಯಾದ ದಿನ ಇದಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕವಾಗಿ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದರು.

ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು, ಜನಪರ ಆಳ್ವಿಕೆ ಮತ್ತು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಮೂಲಕ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತ ಹೊಂದಿದೆ. ಇಲ್ಲಿನ ಭಾವೈಕ್ಯತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ನಿಭಾಯಿಸಬೇಕು ಎಂದು ತಿಳಿಸಿದರು.

ಮಹಿಳಾ ಸಮಾಜದ ಅಧ್ಯಕ್ಷೆ ಎಂ.ಕೆ.ವತ್ಸಲಾ ಮಾತನಾಡಿ, ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ದೇಶಪ್ರೇಮದ ಸಂಕೇತವಾಗಿ, ಜನರಲ್ಲಿ ಏಕತೆ ಮತ್ತು ಬ್ರಿಟಿಷರ ವಿರುದ್ಧ ಹೋರಾಡುವ ಸ್ಫೂರ್ತಿಯನ್ನು ಮೂಡಿಸಿದ ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದೆ. ಈ ಗೀತೆಯಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ತ್ಯಾಗವನ್ನು ಸದಾ ನೆನಪಿಸುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಜವಾಬ್ದಾರಿಯನ್ನು ನೆನಪಿಸುವ ನಮ್ಮ ಸಂವಿಧಾನದಲ್ಲಿ ದೇಶದ ಅಭಿವೃದ್ಧಿಗೆ ಸೂಕ್ತ ನಾಯಕರನ್ನು ಆರಿಸುವ ಮತದಾನ ಹಕ್ಜು ಪ್ರಧಾನ ಅಂಶವಾಗಿದೆ. ಪ್ರಬುದ್ಧ ಮತ್ತು ನೈತಿಕ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ಅವಕಾಶ ಭಾರತೀಯರಿಗೆ ಇದೆ ಎಂದರು.

ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ ಅಣ್ಣಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಎಂ.ಸಿ.ಮಂಜುನಾಥ್, ಕಸಾಪ ಪ್ರತಿನಿಧಿಗಳಾದ ಕೋದಂಡರಾಮ್, ಮುನಿರಾಜು, ರಂಗಸ್ವಾಮಯ್ಯ, ಸಫೀರ್, ಬಾಶೆಟ್ಟಿಹಳ್ಳಿ ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

26ಕೆಡಿಬಿಪಿ1-

ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.