ಸೈದಾಪೂರದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಮನವಿ

| Published : Aug 30 2024, 01:10 AM IST

ಸಾರಾಂಶ

Request for establishment of fire station in Saidapur

-ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶರಣಿಕ ಕುಮಾರ ದೋಕಾ ಜಿಲ್ಲಾಧಿಕಾರಿಗೆ ಮನವಿ

------

ಕನ್ನಡಪ್ರಭ ವಾರ್ತೆ ಯಾದಗಿರಿ

ಸೈದಾಪೂರ ಪಟ್ಟಣದ ಒಂದು ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ, ಹಲವಾರು ವರ್ಷಗಳಿಂದ ಪಟ್ಟಣದಲ್ಲಿ ನೂರಾರು ಜನರು ಅಂಗಡಿಗಳಲ್ಲಿ ವ್ಯಾಪಾರ ಮಾಡಿಕೊಂಡು ಬಂದಿದ್ದಾರೆ. ಆದರೆ, ಕಳೆದ 5-6 ವರ್ಷಗಳಿಂದ ವಿದ್ಯುತ್ ಅವಘಡಗಳು ಹೆಚ್ಚಾಗಿ ಅಪಾರ ನಷ್ಟ-ಪ್ರಾಣಹಾನಿ ಅನುಭವಿಸುತ್ತಿದ್ದಾರೆ. ಕೂಡಲೇ ಸರ್ಕಾರ ಅಗ್ನಿಶಾಮಕ ಠಾಣೆ ಮಂಜೂರು ಮಾಡಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶರಣಿಕ ಕುಮಾರ ದೋಕಾ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ಕಳೆದ ವರ್ಷ ಬಟ್ಟೆ ಅಂಗಡಿಗೆ ವಿದ್ಯುತ್ ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ಬಟ್ಟೆಗಳು ಹಾಗೂ ಯುವ ದಂಪತಿ ಮೃತಪಟ್ಟ ಘಟನೆ ಜರುಗಿದೆ. ಅಲ್ಲದೇ ಪಕ್ಕದಲ್ಲಿರುವ ಕಡೇಚೂರ-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ಕೂಡ ಇಂತಹ ಘಟನೆಗಳು ನಡೆದು ಹಲವಾರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದೆ ಪಟ್ಟಣದ ಕೇಂದ್ರ ಸ್ಥಳದಲ್ಲಿ ಬೆಂಕಿ ಅನಾಹುತದಿಂದ 10 ಅಂಗಡಿಗಳು ಭಸ್ಮವಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇಂತಹ ಸಮಯದಲ್ಲಿ ಸಾರ್ವಜನಿಕರು ಯಾದಗಿರಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಬೇಕು. ಅವರು ಪಟ್ಟಣಕ್ಕೆ ಬರುವಷ್ಟರಲ್ಲಿ ಆಸ್ತಿ-ಪಾಸ್ತಿಗಳು ಸಂಪೂರ್ಣ ನಾಶವಾಗಿರುತ್ತವೆ. ಕಾರಣ ಸರ್ಕಾರ ತುರ್ತಾಗಿ ಅಗ್ನಿಶಾಮಕ ಠಾಣೆ ಮಂಜೂರು ಮಾಡಿ, ಸಾರ್ವಜನಿಕರ ಹಿತ ಹಾಗೂ ಆಸ್ತಿಗಳನ್ನು ಕಾಪಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಸೈದಾಪೂರದಲ್ಲಿ ಸಂಭವಿಸಿದ ಅಗ್ನಿ ಅವಘಡಗಳ ಮಾಹಿತಿ ನನಗಿದೆ. ಸರ್ಕಾರಕ್ಕೆ ಪತ್ರ ಬರೆದು ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

-------

29ವೈಡಿಆರ್8: ಶರಣಿಕ ಕುಮಾರ ದೋಕಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು, ಯಾದಗಿರಿ.