ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

| Published : Feb 14 2024, 02:17 AM IST

ಸಾರಾಂಶ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಸಂಘ ಹುನಗುಂದ ತಾಲೂಕು ಸಮಿತಿಯ ಪದಾಧಿಕಾರಿಗಳು ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹುನಗುಂದವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಸಂಘ ಹುನಗುಂದ ತಾಲೂಕು ಸಮಿತಿಯ ಪದಾಧಿಕಾರಿಗಳು ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಎಚ್.ಬಿ. ಒಂಟಿ ಮನವಿ ಸಲ್ಲಿಸಿ ಮಾತನಾಡಿ, ರಾಜ್ಯಾದ್ಯಂತ 10 ಲಕ್ಷಕ್ಕೂ ಸ್ತ್ರೀ-ಪುರುಷರು ಹೊಲಿಗೆ ಕೆಲಸಗಾರರಿಗೆ ಜೀವನ ಭದ್ರತೆ ಮತ್ತು ಟೈಲರ್ ಕ್ಷೇಮನಿಧಿ ಮಂಡಳಿ ರಚಿಸಬೇಕು. ಹೊಲಿಗೆ ವೃತ್ತಿಯನ್ನು ಜವಳಿ ನಿಗಮಕ್ಕೆ ಸೇರಿಸಬೇಕು. ಭವಿಷ್ಯದ ನಿಧಿ ಮತ್ತು ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಹೊಲಿಗೆ ಕೆಲಸಗಾರರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ, ಹೊಲಿಗೆ ಕೆಲಸಗಾರರಿಗೆ ವಾಸಕ್ಕಾಗಿ ಮನೆ ನಿರ್ಮಾಣ ಅಥವಾ ದುರಸ್ತಿ ಮಾಡಲು ಹಾಗೂ ಹೊಲಿಗೆ ಯಂತ್ರ ಖರೀದಿಸಲು ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ನೀಡುವುದು. ಹೊಲಿಗೆ ಕೆಲಸಗಾರರಿಗೆ ಆರೋಗ್ಯ ವಿಮೆ ಜಾರಿಗೊಳಿಸುವುದು. ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ಜಾರಿಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ಖಜಾಂಚಿ ಮಹಾಂತೇಶ ಕೆಸರಭಾವಿ, ಕಾಯದರ್ಶಿ ಎಂ.ಎಚ್. ಪಿಂಜಾರ, ಸಂಗಮೇಶ ಜಂಬಲದಿನ್ನಿ, ಮಲೀಕಸಾಬ ಕಡಿವಾಲ, ಶರಣಪ್ಪ ಚಿಕ್ಕಣ್ಣವರ, ರಸೂಲ ಗಡೇದ, ದಾವಲಸಾಬ ಪಾಲ್ಗೊಂಡಿದ್ದರು.