ಸಾರಾಂಶ
ಬೇಲೂರು ತಾಲೂಕಿನ ಅರೇಹಳ್ಳಿ ಮಲೆನಾಡು ಭಾಗದಲ್ಲಿ ವರುಣನ ಆರ್ಭಟಕ್ಕೆ ಕಾಫಿ ಸೇರಿದಂತೆ ಇತರ ಬೆಳೆಗಳು ಹಾಳಾಗಿವೆ. ಇದರ ಜೊತೆ ಕಾಡಾನೆಗಳ ಹಾವಳಿಂದ ಭಯದ ವಾತಾವರಣ ಉಂಟಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಕರ್ನಾಟಕ ಕಾಫಿ ಬೆಳೆಗಾರರ ಸಂಘ ಅರೇಹಳ್ಳಿ ವತಿಯಿಂದ ತಹಸೀಲ್ದಾರ್ ಮಮತಾ ಎಂ ಅವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಬೇಲೂರು ತಾಲೂಕಿನ ಅರೇಹಳ್ಳಿ ಮಲೆನಾಡು ಭಾಗದಲ್ಲಿ ವರುಣನ ಆರ್ಭಟಕ್ಕೆ ಕಾಫಿ ಸೇರಿದಂತೆ ಇತರ ಬೆಳೆಗಳು ಹಾಳಾಗಿವೆ. ಇದರ ಜೊತೆ ಕಾಡಾನೆಗಳ ಹಾವಳಿಂದ ಭಯದ ವಾತಾವರಣ ಉಂಟಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಕರ್ನಾಟಕ ಕಾಫಿ ಬೆಳೆಗಾರರ ಸಂಘ ಅರೇಹಳ್ಳಿ ವತಿಯಿಂದ ತಹಸೀಲ್ದಾರ್ ಮಮತಾ ಎಂ ಅವರಿಗೆ ಮನವಿ ಸಲ್ಲಿಸಲಾಯಿತು.
ದಿನನಿತ್ಯ ಕಾಡಾನೆಗಳ ಹಾವಳಿಯ ಜೊತೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದ ಪರಿಣಾಮವಾಗಿ ಕಾಫಿ, ಕಾಳು ಮೆಣಸು, ಅಡಿಕೆ, ಭತ್ತ ಹಾಗು ಇತರೆ ಬೆಳೆಗಳು ಸರಿಸುಮಾರು ಶೇಕಡಾ 50ಕ್ಕಿಂತ ಹೆಚ್ಚು ಹಾನಿಯಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರವನ್ನು ಒದಗಿಸುವಂತೆ ಕರ್ನಾಟಕ ಕಾಫಿ ಬೆಳೆಗಾರರ ಸಂಘ ಅರೇಹಳ್ಳಿ ವತಿಯಿಂದ ತಹಸೀಲ್ದಾರ್ ಅವರನ್ನು ಭೇಟಿಯಾಗಿ ಮನವಿ ಮಾಡಲಾಯಿತು.ಈ ವೇಳೆ ಕರ್ನಾಟಕ ಕಾಫಿ ಬೆಳೆಗಾರರ ಸಂಘ ಅರೇಹಳ್ಳಿಯ ಅಧ್ಯಕ್ಷರಾದ ಬಿಪಿ ಬಸವರಾಜ್, ಉಪಾಧ್ಯಕ್ಷರಾದ ಶಾರೀಬ್ ಫರ್ಹಾನ್, ಕಾರ್ಯದರ್ಶಿ ಬಿ ಸಿ ಮೋಹನ್, ಎಚ್.ಡಿ.ಪಿ.ಎ ಉಪಾಧ್ಯಕ್ಷರಾದ ಮಂಜುನಾಥ್ ಶೆಟ್ಟಿ, ಸಂಘದ ಪದಾಧಿಕಾರಿಗಳು ಹಾಜರಿದ್ದರು.