ಹಳೇ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಮನವಿ

| Published : Jan 30 2024, 02:04 AM IST

ಸಾರಾಂಶ

ಮುಧೋಳ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಮುಧೋಳ ಘಟಕದ ವತಿಯಿಂದ ಅಧ್ಯಕ್ಷ ಮಂಜುನಾಥ ಪರೀಟ ಹಾಗೂ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಪ್ರಭ ವಾರ್ತೆ ಮುಧೋಳ

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಮುಧೋಳ ಘಟಕದ ವತಿಯಿಂದ ಅಧ್ಯಕ್ಷ ಮಂಜುನಾಥ ಪರೀಟ ಹಾಗೂ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಾಧ್ಯಕ್ಷ ರಾಜು ವಾರದ ಮಾತನಾಡಿ, ರಾಜ್ಯ ಸರ್ಕಾರ ನೊಂದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಹಂಬಲದೊಂದಿಗೆ ಕಾಂಗ್ರೆಸ್ ನೀಡಿದ್ದ 5 ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿದ್ದು, ಇದು ಜನಮಣ್ಣನೆಗೆ ಕಾರಣವಾಗಿದೆ. ಅದರಂತೆ ಸರ್ಕಾರಿ ನೌಕರರಿಗೆ ನೀಡಿರುವ ಭರವಸೆಯಂತೆ ನಮ್ಮ ಬೇಡಿಕೆ ಈಡೇರಿಸಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಆರ್.ಬಿ.ತಿಮ್ಮಾಪುರ, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಹೇಳಿದರು. ನೌಕರರ ಸಂಘದ ಅಧ್ಯಕ್ಷ ರಮೇಶ ನಿಡೋಣಿ, ರಮೇಶ ಅರಕೇರಿ, ಮಲ್ಲಿಕಾರ್ಜುನ ಹುಲಸೂರ, ಬಸವರಾಜ ಬಳ್ಳಾರಿ, ಪರಶುರಾಮ ಬಗಲಿ, ಐ.ಎಂ. ಧಾರವಾಡಮಠ, ಪ್ರಕಾಶ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.