ಸಾರಾಂಶ
ದೇವನಹಳ್ಳಿ: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ರವರು ಸರ್ಕಾರದ ಕೈಗೊಂಬೆಯಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಮುಖ್ಯಮಂತ್ರಿರವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದಕ್ಕೆ ದೇವನಹಳ್ಳಿ ತಾಲೂಕು ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಪಕ್ಷದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧದ ಆವರಣದಲ್ಲಿ ಧರಣಿ ನಡೆಸಿದರು.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಮುಡಾ ಮತ್ತು ವಾಲ್ಮೀಕಿ ಹಗರಣಗಳ ಬಗ್ಗೆ ಪ್ರತಿದಿನ ಪ್ರತಿಭಟನೆ ನಡೆಯುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ, ಈ ಕೂಡಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಮುನೇಗೌಡ ಹಾಗೂ ಕಲ್ಯಾಣ ಕುಮಾರ ಬಾಬು ಒತ್ತಾಯಿಸಿದರು.ಈ ಮಧ್ಯೆ ಜೆಡಿಎಸ್ ಪಕ್ಷಕ್ಕೆ ಮಸಿ ಬಳೆಯಲು ಹನ್ನೊಂದು ವರ್ಷಗಳಿಂದ ಠಿಕಾಣಿ ಹೂಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ರವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿಯವರ ಬಗ್ಗೆ ಕೀಳಾಗಿ ಹೇಳಿಕೆ ನೀಡಿದ್ದು ಅವರ ಮೇಲೆ ರಾಜ್ಯಪಾಲರು ಕ್ರಮ ಕೈಗೊಂಡು ಕೂಡಲೇ ವರ್ಗಾವಣೆ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ತಾಲೂಕು ಜೆಡಿಎಸ್ ಅಧ್ಯಕ್ಷ ಆರ್. ಮುನೇಗೌಡ, ವಕೀಲ ಮುನಿರಾಜು, ಜಗದೀಶ್, ಕಾಮೇನಹಳ್ಳಿ ರಮೇಶ್, ಮಾಜಿ ಪುರಸಭಾಧ್ಯಕ್ಷ ನರಸಿಂಹಮೂರ್ತಿ , ಶ್ರೀನಿವಾಸ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಮನವಿ ಪತ್ರವನ್ನು ತಹಸೀಲ್ದಾರ್ ಗ್ರೇಡ್ 2 ಉಷಾರವರಿಗೆ ಸಲ್ಲಿಸಿದರು.