ಸಾರಾಂಶ
ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.
ಚಿತ್ರದುರ್ಗ: ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.
ಶೋಷಿತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೋವಿ ಗುರುಪೀಠಕ್ಕೆ ಭೇಟಿ ನೀಡಿದ ವೇಳೆ ಮಠಾಧೀಶರು ಮನವಿ ಸಲ್ಲಿಸಿದರು. ಕಾಂತರಾಜ್ ವರದಿ ಇಷ್ಟೊತ್ತಿಗೆ ಮಂಡನೆಯಾಗಬೇಕಿತ್ತು. ಕಾರಣಾಂತರದಿಂದ ವಿಳಂಬವಾಗಿದೆ. ಮತ್ತಷ್ಟು ಕಾಲ ನೂಕದೆ ತಕ್ಷಣ ಅಂಗೀಕರಿಸಬೇಕೆಂದು ಮಠಾಧೀಶರು ವಿನಂತಿಸಿದರು.ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಶೋಷಿತರ ಸಮಾವೇಶದಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿ ಸ್ವೀಕಾರ ಮಾಡುವುದಾಗಿ ಹೇಳಿದ್ದೇನೆ. ಮಠಾಧಿಪತಿಗಳು ಈ ಬಗ್ಗೆ ಒತ್ತಡ ಹಾಕಿರುವುದು ಪರಿಸ್ಥಿತಿ ಗಂಭೀರತೆ ಮನವರಿಕೆ ಮಾಡಿಕೊಟ್ಟಿದೆ. ಈ ಬಗ್ಗೆ ಸಂಪುಟ ಸಚಿವರ ಜೊತೆ ಚರ್ಚಿಸಿ ಶೀಘ್ರ ನಿರ್ಣಯಕ್ಕೆ ಬರಲಾಗುವುದೆಂದು ಸಿಎಂ ಭರವಸೆ ನೀಡಿದರು.
ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ,ಭಗೀರಥ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀ ಶ್ರೀಕೃಷ್ಣಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಜಗದ್ಗುರು ಶ್ರೀ ಬಸವ ಗುಂಡಯ್ಯ ಸ್ವಾಮೀಜಿ, ಮಡಿವಾಳ ಗುರುಪೀಠದ ಮಾಚಿದೇವ ಸ್ವಾಮೀಜಿ,ಸೇವಾಲಾಲ್ ಗುರುಪೀಠದನಂದಮಸಂದ ಸ್ವಾಮೀಜಿ, ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ,ಇಳಕಲ್ ಮಠದ ಬಸವ ಪ್ರಸಾದ ಸ್ವಾಮೀಜಿ ಈ ವೇಳೆ ಉಪಸ್ಥಿತರಿದ್ದರು.