ಆಯುಷ್ಮಾನ್ ಸೇವೆ ಸಮರ್ಪಕ ಜಾರಿಗೊಳಿಸುವಂತೆ ಡಿಸಿಗೆ ಮನವಿ

| Published : Nov 15 2024, 12:39 AM IST

ಸಾರಾಂಶ

ಆಯುಷ್ಮಾನ್ ಭಾರತ್ ಯೋಜನೆಯ ರೋಗಿಗಳಿಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಜಿಲ್ಲಾಡಳಿತ ಈ ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯು ಸಾರ್ವಜನಿಕರಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾವು ಗುರುವಾರ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿತು.ಆಯುಷ್ಮಾನ್ ಭಾರತ್ ಯೋಜನೆಯ ರೋಗಿಗಳಿಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಬಡ ರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯ ಸವಲತ್ತನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಜಿಲ್ಲಾಡಳಿತ ಈ ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.ನ.25ರ ಒಳಗಾಗಿ ಈ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.ಈ ಸಂದರ್ಭ ಬಿಜೆಪಿ ಯುವಮೋರ್ಚಾ‌ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಉಪಾಧ್ಯಕ್ಷರಾದ ಪ್ರಸಾದ್ ಬಿಲ್ಲವ, ಅರ್ಜುನ್ ಪ್ರಭು, ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರ ಧಾನ ಕಾರ್ಯದರ್ಶಿ ನಿತಿನ್ ಪೈ, ಮುಖಂಡರಾದ ಪ್ರಥ್ವೀರಾಜ್ ಮಣಿಪಾಲ್, ನಿಖಿಲ್ ಮಡಿವಾಳ್, ಧನುಷ್ ಕಡಿಯಾಳಿ ಹಾಗೂ ಇನ್ನಿತರ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.