ರಾಜ್ಯದ ವಿವಿಧ ಶಿಕ್ಷಣ ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ದೀರ್ಘಕಾಲದಿಂದ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತುರ್ತಾಗಿ ನೇಮಕ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ರಾಜ್ಯದ ವಿವಿಧ ಶಿಕ್ಷಣ ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ದೀರ್ಘಕಾಲದಿಂದ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತುರ್ತಾಗಿ ನೇಮಕ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಗ್ರಂಥಾಲಯ ಸಂಘದ ಅಧ್ಯಕ್ಷ ಎಂ.ಕೆ.ಬಿರಾದಾರ ಮಾತನಾಡಿ, ರಾಜ್ಯದ ವಿಶ್ವವಿದ್ಯಾಲಯಗಳು, ಸರ್ಕಾರಿ ಹಾಗೂ ಅನುದಾನಿತ ಪ್ರಥಮದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್, ಇಂಜಿನಿಯರಿಂಗ ಪಿಯು ಕಾಲೇಜುಗಳಲ್ಲಿ ಅನೇಕ ಮಾನ್ಯತಾ ಗ್ರಂಥ ಪಾಲಕರ ಹುದ್ದೆಗಳು ದೀರ್ಘಕಾಲದಿಂದ ಖಾಲಿಯಾಗಿವೆ. ಇದಲ್ಲವೆ ಸಾರ್ವಜನಿಕ ಗ್ರಂಥಾಲಯಗಳು ರಾಜ್ಯ ಕೇಂದ್ರ, ಜಿಲ್ಲಾಕೇಂದ್ರ, ನಗರ ಕೇಂದ್ರ ಹಾಗೂ ತಾಲೂಕು ಗ್ರಂಥಾಲಯಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಗ್ರಂಥಾಲಯಗಳು, ಕರ್ನಾಟಕ ಪಬ್ಲಿಕ್ ಶಾಲೆಗಳ ಗ್ರಂಥಾಲಯಗಳು ಹಾಗೂ ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು, ವಿಧಾನಸೌಧ, ಪುರಾತತ್ವ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿಯೂ ಗ್ರಂಥಪಾಲಕರ ಕೊರತೆ ತೀವ್ರವಾಗಿದೆ ಎಂದು ತಿಳಿಸಿದರು.ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಯುವಕರು ಉನ್ನತ ಶಿಕ್ಷಣ ಪಡೆದು ವರ್ಷಗಳಿಂದ ನಿರೀಕ್ಷೆಯಲ್ಲಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ವಿನಂತಿಸಿದರು. ಸಾವಿರಾರು ಅರ್ಹ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರದ ತ್ವರಿತ ಹಾಗೂ ಸಕಾರಾತ್ಮಕ ಕ್ರಮವನ್ನು ನಿರೀಕ್ಷಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ ಅತಿಥಿ ಗ್ರಂಥಪಾಲಕರು, ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.