ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಅವರ ಪರ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಟೆರಿಷಿಯನ್ ಕಾಲೇಜ್, ಮೌಲಾನಾ ಆಜಾದ್ ಶಾಲೆ, ಅಧ್ಯಯನ ಸ್ಕೂಲ್, ಸರ್ಕಾರಿ ಶಾಲೆಗಳಿಗೆ ಹೋಗಿ ಮತಯಾಚಿಸಿದರು.ಈ ವೇಳೆ ಅಲ್ಪಸಂಖ್ಯಾತರ ಮೋರ್ಚಾ ರಾಜ್ಯ ಅಧ್ಯಕ್ಷ ಡಾ. ಅನಿಲ್ ಥಾಮಸ್. ಗೋಪಾಲ್ ಗೌಡ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶುಶ್ರುತ್ ಗೌಡ, ಬಿಜೆಪಿ ಮುಖಂಡರಾದ ರಮೇಶಣ್ಣ. ಅಶೋಕಣ್ಣ, ಬಿ. ಆನಂದ,ಮಣಿರತ್ನಂ, ನಾಗರಾಜ್, ಮೈಸೂರು ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಆರ್.ಎಕ್ಸ್ ಮೋಹನ ಹಾಗೂ ಪ್ರಮುಖ ಕಾರ್ಯಕರ್ತರು ಇದ್ದರು.ರವಿಚಂದ್ರೇಗೌಡ ಮನವಿಕನ್ನಡಪ್ರಭ ವಾರ್ತೆ ಮೈಸೂರು
ಜೆಡಿಎಸ್ ಪಕ್ಷವು ಸದಾ ಶಿಕ್ಷಕರ ಪರವಾಗಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಶಿಕ್ಷಕರು ಮೊದಲ ಪ್ರಾಶಸ್ತ್ಯ ಮತ ನೀಡುವ ಮೂಲಕ ಗೆಲುವಿಗೆ ಕಾರಣರಾಗಬೇಕು ಎಂದು ಜೆಡಿಎಸ್ ವಕ್ತಾರ ಎನ್.ಆರ್. ರವಿಚಂದ್ರೇಗೌಡ ಮನವಿ ಮಾಡಿದರು.ಎಚ್.ಡಿ. ದೇವೇಗೌಡ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದ ವೇಳೆ ಸುಮಾರು 1 ಲಕ್ಷ ಶಿಕ್ಷಕರನ್ನು ನೇಮಿಸಿದ್ದರು. ಅಲ್ಲದೆ, ಶಿಕ್ಷಕರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ 4466 ಕೋಟಿ ರೂ. ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದರು. 7ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು 8ನೇ ತರಗತಿಗೆ ದಾಖಲಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಎಲ್ಲಾ ಬಾಲಕಿಯರಿಗೆ ಸರ್ಕಾರಿ ವೆಚ್ಚದಲ್ಲಿ ಸೈಕಲ್ ವಿತರಿಸಿದರು. ಇದೇ ರೀತಿ ಜೆಡಿಎಸ್ ಸದಾ ಶಿಕ್ಷಣ ಕ್ಷೇತ್ರಕ್ಕೆ ಅನುಕೂಲ ಕಲ್ಪಿಸಿದೆ. ಆದ್ದರಿಂದ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಅವರು ಕೋರಿದರು.ಬಿಜೆಪಿ ವಕ್ತಾರ ಮೋಹನ್, ಜೆಡಿಎಸ್ ಮುಖಂಡರಾದ ಆರ್. ಮುದ್ದುರಾಜ್, ಮಂಜುನಾಥ್, ಜಯರಾಮ್ ಇದ್ದರು.