ದೇವನಹಳ್ಳಿ: ಹಳೆಯ ತಾಲೂಕು ಕಚೇರಿ ಜಾಗವನ್ನು ಅನೇಕ ವರ್ಷಗಳಿಂದ ಕೊರಚರಪಾಳ್ಯದ ಸರ್ಕಾರಿ ಶಾಲೆಗೆ ಹಸ್ತಾಂತರಿಸುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಸಚಿವರಿಗೂ ಮನವಿ ಸಲ್ಲಿಸಿದ್ದೇವಾದರೂ ಆ ಜಾಗ ಇನ್ನೂಶಾಲೆಗೆ ಹಸ್ತಾಂತರಿಸಿಲ್ಲ ಎಂದು ಮಾಜಿ ಶಾಸಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಜಿ.ಚಂದ್ರಣ್ಣ ಅಸಮಾಧಾನ ವ್ಯಕ್ತಪಡಿಸಿದರು
ದೇವನಹಳ್ಳಿ: ಹಳೆಯ ತಾಲೂಕು ಕಚೇರಿ ಜಾಗವನ್ನು ಅನೇಕ ವರ್ಷಗಳಿಂದ ಕೊರಚರಪಾಳ್ಯದ ಸರ್ಕಾರಿ ಶಾಲೆಗೆ ಹಸ್ತಾಂತರಿಸುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಸಚಿವರಿಗೂ ಮನವಿ ಸಲ್ಲಿಸಿದ್ದೇವಾದರೂ ಆ ಜಾಗ ಇನ್ನೂಶಾಲೆಗೆ ಹಸ್ತಾಂತರಿಸಿಲ್ಲ ಎಂದು ಮಾಜಿ ಶಾಸಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಜಿ.ಚಂದ್ರಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಕೊರಚರಪಾಳ್ಯದ ಸರ್ಕಾರಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆ ನೂರು ವರ್ಷ ಪೂರೈಸಿದ್ದು, ೪೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಅದೇ ಶಾಲೆಯಲ್ಲಿ ಪ್ರೌಢಶಾಲೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಈಗಿನ ಶಾಲೆಯಲ್ಲಿ ಕೊಠಡಿಗಳ ಸಮಸ್ಯೆಯಿಂದಾಗಿ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರವೇಶ ನೀಡದೆ ವಾಪಸ್ ಕಳುಹಿಸಲಾಗಿದೆ. ಅದಕ್ಕೆ ಶಾಲೆಯ ಪಕ್ಕದಲ್ಲೇ ಇರುವ ಹಳೆಯ ತಾಲೂಕು ಕಚೇರಿ ಜಾಗವನ್ನು ಶಾಲೆಗೆ ನೀಡುವಂತೆ ಸಚಿವರಿಗೆ ಈಗಾಗಲೇ ಮನವಿ ಮಾಡಿದ್ದೇವೆ. ಮತ್ತೊಮ್ಮೆ ಸಂಘದ ನಿಯೋಗ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿ, ತಾಲೂಕು ಕಚೇರಿಯನ್ನೀಗ ಹೊಸಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಹಳೆ ತಾಲೂಕು ಕಚೇರಿ ಪಾಳುಬಿದ್ದಿರುವ ಬದಲು ಪಕ್ಕದಲ್ಲಿರುವ ಸರ್ಕಾರಿ ಶಾಲೆಗೆ ನೀಡಿದರೆ ಅನುಕೂಲವಾಗುತ್ತದೆ. ಪ್ರೌಢಶಾಲೆ ತರಗತಿಗಳಿಗೆ ಸ್ಥಳಾವಕಾಶದ ಕೊರತೆಯಿದೆ. ಹಳೆ ತಾಲೂಕು ಕಚೇರಿ ಜಾಗವನ್ನು ಶಾಲೆಗೆ ನೀಡುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.
೧೧ ದೇವನಹಳ್ಳಿ ಚಿತ್ರಸುದ್ದಿ: ೦೨ದೇವನಹಳ್ಳಿಯ ಕೊರಚರಪಾಳ್ಯದ ಸರ್ಕಾರಿ ಶಾಲೆಗೆ ಹಳೆಯ ತಾಲೂಕು ಕಚೇರಿ ಸ್ಥಳವನ್ನು ಬಿಟ್ಟುಕೊಡುವಂತೆ ಮಾಜಿ ಶಾಸಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಜಿ.ಚಂದ್ರಣ್ಣ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿಯೋಗ ತೀರ್ಮಾನಿಸಿತು.