ಸಾರಾಂಶ
ನೌಕರರ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿದರು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಶೀಘ್ರ ಜಾರಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನೌಕರರ ಸಂಘದ ಸದಸ್ಯರು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಾಪಂ ಶಾಸಕರ ಕಚೇರಿ ಬಳಿ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸರ್ಕಾರವು 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ಈಗಾಗಲೇ ನೀಡಿರುವ ಶೇ.17 ರಷ್ಟು ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ.40ರಷ್ಟು ಫಿಟ್ಮೆಂಟ್ ಸೌಲಭ್ಯವನ್ನು 2022ರ ಜುಲೈಯಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ನೀಡಬೇಕು ಎಂದು ಆಗ್ರಹಿಸಿದರು.
ಎನ್ ಪಿ.ಎಸ್ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿ, 7ನೇ ವೇತನ ಆಯೋಗದ ವರದಿ ಪಡೆದು ಶೀಘ್ರ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯುವಂತೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಮನವಿ ಮಾಡಿದರು.ನೌಕರರ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿದರು.
ನೌಕರರ ತಾಲೂಕು ಸಂಘದ ಅಧ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ, ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಗುರುಸ್ವಾಮಿ, ಜಿ.ಎನ್.ಮಲ್ಲೇಶ್, ಶಿವಶಂಕರ್, ವೆಂಟಕೇಶ್, ರಾಚಾಪ್ಪಾಜಿ. ಎಚ್.ವಿ.ನಿಂಗರಾಜು ಇದ್ದರು.-------------
20ಕೆಎಂಎನ್ ಡಿ13ರಾಜ್ಯ ಸರ್ಕಾರಿ ನೌಕರರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.