ಸಾರಾಂಶ
ರಾಯಬಾಗ ತಾಲೂಕಿನ ಮೊರಬ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಬೇಕೆಂದು ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಡಿ.ಎಸ್. ನಾಯಿಕ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಿಗೆ ಮನವಿ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ರಾಯಬಾಗ
ತಾಲೂಕಿನ ಮೊರಬ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಬೇಕೆಂದು ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಡಿ.ಎಸ್. ನಾಯಿಕ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಿಗೆ ಮನವಿ ಮಾಡಿದ್ದಾರೆ.ಈಚೆಗೆ ಪಟ್ಟಣದ ಬಾಬು ಜಗಜೀವನರಾಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ಮೊರಬ ಸರ್ಕಾರಿ ಪ್ರೌಢಶಾಲೆ ಗ್ರಾಮೀಣ ಭಾಗದಲ್ಲಿದ್ದು, ಸುಮಾರು 15-20 ಕಿಮೀ ಒಳಗಡೆ ಯಾವುದೇ ಪದವಿ ಪೂರ್ವ ಕಾಲೇಜು ಇಲ್ಲ. ಹೀಗಾಗಿ 10ನೇ ತರಗತಿ ಪಾಸಾದ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ತುಂಬಾ ಅನಾನೂಕೂಲವಾಗಲಿದೆ. 15 ವರ್ಷಗಳಿಂದ ಸರ್ಕಾರಿ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪದವಿಪೂರ್ವ ಕಾಲೇಜು ಪ್ರಾರಂಭಕ್ಕೆ ಬೇಕಾದ ಅಗತ್ಯ ಸೌಕರ್ಯಗಳು ಗ್ರಾಮದಲ್ಲಿದ್ದು, ಶೀಘ್ರ ಪದವಿಪೂರ್ವ ಕಾಲೇಜು ಮಂಜೂರು ಮಾಡಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.,
ಶಾಸಕ ಡಿ.ಎಂ. ಐಹೊಳೆ, ಮಾಜಿ ಶಾಸಕ ಎಸ್.ಬಿ.ಘಾಟಗೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಬಂಡಗರ, ರಾಜು ಶಿರಗಾಂವೆ, ದೀಲಿಪ ಜಮಾದಾರ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))