ಬಯಲು ಸೀಮೆಯ ಕೋಲಾರ ಜಿಲ್ಲೆಗೆ ಖಾಸಗಿ ಮೆಡಿಕಲ್ ಕಾಲೇಜು ಇದ್ದು, ಇಡೀ ದೇಶಕ್ಕೆ ಹಾಲು ಹಣ್ಣು ತರಕಾರಿ ರೇಷ್ಮೆ, ಚಿನ್ನ ನೀಡಿದಂತ ಲಕ್ಷಾಂತರ ಬಡ ರೈತ ಕೂಲಿಕಾರ್ಮಿಕರ ಮಕ್ಕಳ ಕನಸು ನನಸಾಗಲು ಸರ್ಕಾರಿ ವೈದ್ಯಕೀಯ ಕಾಲೇಜು, ಮಂಜೂರು ಮಾಡಬೇಕು.
ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಇ.ಎಸ್.ಐ ಆಸ್ಪತ್ರೆಯಲ್ಲಿ ಮಂಜೂರು ಮಾಡಬೇಕೆಂದು ರೈತ ಸಂಘದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದರು.ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಬಯಲು ಸೀಮೆಯ ಕೋಲಾರ ಜಿಲ್ಲೆಗೆ ಖಾಸಗಿ ಮೆಡಿಕಲ್ ಕಾಲೇಜು ಇದ್ದು, ಇಡೀ ದೇಶಕ್ಕೆ ಹಾಲು ಹಣ್ಣು ತರಕಾರಿ ರೇಷ್ಮೆ, ಚಿನ್ನ ನೀಡಿದಂತ ಲಕ್ಷಾಂತರ ಬಡ ರೈತ ಕೂಲಿಕಾರ್ಮಿಕರ ಮಕ್ಕಳ ಕನಸು ನನಸಾಗಲು ಸರ್ಕಾರಿ ವೈದ್ಯಕೀಯ ಕಾಲೇಜು, ಮಂಜೂರು ಮಾಡಿದರೆ ಸಾವಿರಾರು ವೈದ್ಯರು ಸೃಷ್ಟಿಯಾಗುತ್ತಾರೆ. ಕನಸಿನಲ್ಲಿ ವೈದ್ಯರಾಗುವ ಆಸೆ ಇದ್ದರೂ, ದುಬಾರಿ ಖಾಸಗಿ ವೈದ್ಯಕೀಯ ಡೊನೇಷನ್ ಕಟ್ಟಲಾರದೆ ತಮ್ಮ ಕನಸನ್ನು ಕಣ್ಣೀರಾಗಿ ಕೈ ತೊಳೆಯುತ್ತಿದ್ದಾರೆ. ಸರ್ಕಾರ ಮನಸ್ಸು ಮಾಡಿದರೆ ಬಡ ಮಕ್ಕಳ ಕನಸನ್ನು ನನಸು ಮಾಡಬಹುದೆಂದು ಸಚಿವರಿಗೆ ಮನವರಿಕೆ ಮಾಡಿದರು. ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಒಂದು ಸಿ.ಟಿ ಸ್ಯಾನಿಂಗ್ ಸೆಂಟರ್ ಹಾಗೂ ಒಂದು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸೇರಿದಂತೆ ಜಿಲ್ಲಾದ್ಯಂತ ಲಕ್ಷಾಂತರ ಕಾರ್ಮಿಕರು ದುಡಿಯುತ್ತಿರುವ ಜಿಲ್ಲೆಯಲ್ಲಿ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಇ.ಎಸ್.ಐ ಆಸ್ಪತ್ರೆ ಇಲ್ಲ. ಸರ್ಕಾರ ಇದರ ಕಡೆ ಗಮನಹಿರಿಸಬೇಕೆಂದು ಒತ್ತಾಯ ಮಾಡಿದರು.ಮನವಿ ಸ್ವೀಕರಿಸಿದ ಆರೋಗ್ಯ ಸಚಿವರು ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಮನವಿ ನೀಡುವಾಗ ಜಿಲ್ಲಾ ಕಾರ್ಯಾದ್ಯಕ್ಷ ವಕ್ಕಲೇರಿ ಹನುಮಯ್ಯ, ಯಾರಂಘಟ್ಟ ಗಿರೀಶ್, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ, ಚಂದ್ರಪ್ಪ, ಇದ್ದರು.