ಕೃಷ್ಣೆಗೆ ನೀರು ಹರಿಸಲು ಸರ್ಕಾರಕ್ಕೆ ಮನವಿ

| Published : Mar 30 2024, 12:51 AM IST

ಸಾರಾಂಶ

ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ರಾಜ್ಯದ ಕೃಷ್ಣಾ ನದಿಗೆ 4 ಟಿಎಂಸಿ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಸಕ ಸಿದ್ದು ಸವದಿ ಮತ್ತಿತರ ಗಣ್ಯರ ತಂಡ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ರಾಜ್ಯದ ಕೃಷ್ಣಾ ನದಿಗೆ 4 ಟಿಎಂಸಿ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಸಕ ಸಿದ್ದು ಸವದಿ ಮತ್ತಿತರ ಗಣ್ಯರ ತಂಡ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಮಳೆಯ ಅಭಾವದಿಂದ ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭೀಕರ ಬರಗಾಲ ಎದುರಾಗಿದೆ. ನೀರಿಲ್ಲದೇ ಜನ-ಜಾನುವಾರುಗಳು ತತ್ತರಿಸಿ ಹೋಗಿವೆ. ಹಳ್ಳ-ಕೊಳ್ಳಗಳು, ತೆರೆದ ಬಾವಿಗಳು ಸೇರಿ ಜಲಮೂಲಗಳು ಸಂಪೂರ್ಣ ಬತ್ತಿವೆ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಅಲೆದಾಡುವಂತಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಗ್ರಾಮೀಣ, ನಗರ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಜೂನ್- 2024 ವರೆಗೆ ಕೃಷ್ಣಾ ನದಿಯ ಪಾತ್ರದ ಜನತೆಗೆ ಕನಿಷ್ಠ 4 ಟಿಎಂಸಿ ನೀರಿನ ಅವಶ್ಯಕತೆಯಿದೆ. ಈ ಬಗ್ಗೆ ನೆರೆಯ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದು, ಕನಿಷ್ಠ ನಾಲ್ಕು ಟಿಎಂಸಿ ನೀರು ಬಿಡುವಂತೆ ಮಹಾ ಸರ್ಕಾರಕ್ಕೆ ಪಾವತಿಸಲು ಅನುದಾನ ಬಿಡುಗಡೆ ಮಾಡಲು ಶಾಸಕ ಸವದಿ ಆಗ್ರಹಿಸಿದ್ದಾರೆ.

ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಸಂಜಯ ತೆಗ್ಗಿ, ಬಾಬಾಗೌಡ ಪಾಟೀಲ, ವರ್ಧಮಾನ ಕೋರಿ, ಸುರೇಶ ಅಕ್ಕಿವಾಟ, ಆನಂದ ಕಂಪು ಸೇರಿದಂತೆ ಹಲವು ಮುಖಂಡರು ಇದ್ದರು.