ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್

| Published : Jun 28 2024, 12:49 AM IST

ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ನಿರ್ಮಿಸುವಂತೆ ವಿಮಾನಯಾನ ಖಾತೆ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ ಎಂದರು.

ಈ ಬಗ್ಗೆ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ವಿಮಾನಯಾನ ಸಚಿವರ ಅವರನ್ನೂ ಭೇಟಿ ಮಾಡಿ ವಿಮಾನ ನಿಲ್ದಾಣ ಜೊತೆಗೆ ಮಂಡ್ಯ ನಗರದಲ್ಲಿ ಐಟಿ ಪಾರ್ಕ್ ನಿರ್ಮಿಸಲು ಸಹ ಒತ್ತಾಯಿಸಲಾಗುವುದು ಎಂದರು.

ಮೈಷುಗರ್ ಹೊಸ ಕಾರ್ಖಾನೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಯಾವ ಸ್ಥಳದಲ್ಲಿ ಕಾರ್ಖಾನೆ ಮಾಡಬೇಕು ಎಂಬುದರ ಬಗ್ಗೆ ತಾಂತ್ರಿಕ ತಜ್ಞರ ತಂಡ ಶೀಘ್ರ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಡಿಸೆಂಬರ್‌ನಲ್ಲಿ ಮಂಡ್ಯ ನಗರದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗಧಿಪಡಿಸಲಾಗಿದೆ. ಹೀಗಾಗಿ ಮಂಡ್ಯ ನಗರದ ರಸ್ತೆಗಳ ಅಭಿವೃದ್ಧಿಗಾಗಿ 30 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಹೆದ್ದಾರಿ ಪ್ರಾಧಿಕಾರದಿಂದ ಮಂಡ್ಯ ನಗರದ ರಸ್ತೆ ಅಭಿವೃದ್ಧಿಗೆ ಅವೈಜ್ಞಾನಿಕ ರೀತಿಯಲ್ಲಿ ಯೋಜನೆ ರೂಪಿಸಲಾಗಿತ್ತು. ಅದನ್ನು ಪರಿವರ್ತಿಸಿ 33 ಕೋಟಿ ರು ವೆಚ್ಚದಲ್ಲಿ ರಸ್ತೆ, ಸೈಕಲ್ ಪಾತ್, ಫುಟ್‌ಪಾತ್ ಹಾಗೂ ವೃತ್ತಗಳ ಆಧುನೀಕರಣದ ಯೋಜನೆ ರೂಪಿಸಲಾಗಿದೆ ಎಂದರು.

ಮತ್ತೆ ವಿದೇಶಕ್ಕೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಪಾಂಡವಪುರ:ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬುಧವಾರ ಸಂಜೆ ಮತ್ತೆ ವಿದೇಶಕ್ಕೆ ತೆರಳಿದ್ದು ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿಗೂ ಗೈರಾದರು.

ದರ್ಶನ್‌ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಒಂದು ವರ್ಷದ ಅವಧಿಯಲ್ಲಿಯೇ ಆರನೇ ಬಾರಿಗೆ ವಿದೇಶಕ್ಕೆ ತೆರಳಿದ್ದಾರೆ. ತಾಲೂಕು ಆಡಳಿತದಿಂದ ಪಟ್ಟಣ ತಹಸೀಲ್ದಾರ್ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಪಟ್ಟಣದ ಐದು ದೀಪವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಗೈರಾದರು.ಶಾಸಕರ ನಡೆಗೆ ಕ್ಷೇತ್ರದಲ್ಲಿ ಜನರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ದರ್ಶನ್‌ ಪುಟ್ಟಣ್ಣಯ್ಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೂ ಗೈರಾಗಿದ್ದರು. ಇದೀಗ ನಾಡಪ್ರಭು ಕೆಂಪೇಗೌಡರ ಜಯಂತಿಗೂ ಗೈರಾಗಿರುವುದಕ್ಕೆ ಸಾಕಷ್ಟು ಟೀಕೆಗಳು ಎದುರಾಗುತ್ತಿವೆ.

ಒಬ್ಬ ಒಕ್ಕಲಿಗ ಸಮಾಜ ಶಾಸಕರಾಗಿರುವ ದರ್ಶನ್‌ ಪುಟ್ಟಣ್ಣಯ್ಯ ಅವರು ಒಕ್ಕಲಿಗ ಸಮಾಜ ಸರ್ವಚ್ಚ ನಾಯಕ ನಾಡಪ್ರಭು ಕೆಂಪೇಗೌಡ ಜಯಂತಿಗೆ ಗೈರಾಗುವ ಮೂಲಕ ಸಮಾಜಕ್ಕೆ ಅಗೌರವ ಸೂಚಿಸಿದ್ದಾರೆ ಎಂದು ಕ್ಷೇತ್ರದ ಒಕ್ಕಲಿಗ ಸಮಾಜದ ಮುಖಂಡರು ಬೇಸರ ಹೊರಹಾಕುತ್ತಿದ್ದಾರೆ.