ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜುಗಳಲ್ಲಿ ಹೊರಡಿಸಿರುವ ಅವೈಜ್ಞಾನಿಕ ಸುತ್ತೋಲೆಗಳನ್ನು ವಾಪಸ್ ಪಡೆಯಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಮಾಡಿವೆ.ಸಂಘಗಳ ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಕ್ರವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನೇ.ರಂ.ನಾಗರಾಜು, ಶಾಲಾ ಶಿಕ್ಷಣ ಇಲಾಖೆಯಿಂದ ಪದವಿಪೂರ್ವ ಕಾಲೇಜುಗಳಿಗೆ ಪೂರಕವಲ್ಲದ, ಆದೇಶಗಳು ಬರುತ್ತಿದ್ದು, ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಜಂಟಿಯಾಗಿ ಹೊರಡಿಸಿರುವ ಸುತ್ತೋಲೆ ವಾಪಸ್ ಪಡೆಯಬೇಕು. 2024-25ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಸಂಭಾವನೆಯ ಬಾಕಿ 13.5 ಕೋಟಿ ರು.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರರು, ಡಿ.ಗ್ರೂಪ್ ನೌಕರರ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಬೇಕು ಎಂದು ಮನವಿ ಮಾಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಿಸಿ ಆ ಮೂಲಕ ಇಲಾಖೆಯ ಪರೀಕ್ಷೆ ಹಾಗೂ ಚಟುವಟಿಕೆಗಳನ್ನು ಉತ್ತೇಜಿಸಬೇಕು. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಪದವಿಪೂರ್ವ ಇಲಾಖೆಗೆ ಹಿಂದೆ ಇದ್ದಂತೆ ವರ್ಗಾಯಿಸಬೇಕು. ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣದಲ್ಲಿರುವಂತೆ ರಚಿಸಬೇಕು ಎಂದು ನೇ.ರಂ.ನಾಗರಾಜು ಹೇಳಿದರು. ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಸತೀಶ್ ಸಿ.ಜಿ, ರಾಜ್ಯ ಸಮಿತಿ ಸದಸ್ಯ ಚಂದ್ರಯ್ಯ, ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್.ಮಹಲಿಂಗೇಶ್, ಅನುದಾನಿತ ಕಾಲೇಜುಗಳ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಕೆ.ಜಿ.ಕುಮಾರ್, ಪ್ರಾಂಶುಪಾಲರಾದ ರಾಜ್‌ಕುಮಾರ್, ವಸಂತಕುಮಾರ್, ವೆಂಕಟಾಚಲ, ಚಂದ್ರಶೇಖರ್, ಸತ್ಯನಾರಾಯಣ, ಹನುಮಂತರಾಯಪ್ಪ, ಜಗದೀಶ್, ಸಿದ್ಧಪ್ಪ, ಕಂಪ್ಲಪ್ಪ, ಗಂಗಹನುಮಯ್ಯ, ಹರೀಶ್, ನಂಜುಂಡಯ್ಯ, ಗೋಪಾಲ್ ಉಪನ್ಯಾಸಕರಾದ ಮಹಾಲಿಂಗಣ್ಣ, ಕೆ.ನಾಗರಾಜು, ಶಶಿಕುಮಾರ್, ಮುದ್ದುವೀರಪ್ಪ, ಶ್ರೀವತ್ಸ, ಕೆ.ಎಸ್.ಚಂದ್ರಶೇಖರ್, ಲತಾ, ಅಂಬಿಕಾ, ಪುಷ್ಪಾವತಿ, ಧರ್ಮಾವತಿ, ನಾಗಲಕ್ಷ್ಮಿ, ಉಮಾದೇವಿ, ತಸ್ಲೀಮ್ ಉನ್ನೀಸ್ ಸೇರಿದಂತೆ ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))