ಹುಣಸಗಿಯಲ್ಲಿ ಮೂವರು ಕಿಶೋರ ಕಾರ್ಮಿಕರ ರಕ್ಷಣೆ

| Published : Aug 15 2024, 01:45 AM IST

ಹುಣಸಗಿಯಲ್ಲಿ ಮೂವರು ಕಿಶೋರ ಕಾರ್ಮಿಕರ ರಕ್ಷಣೆ
Share this Article
  • FB
  • TW
  • Linkdin
  • Email

ಸಾರಾಂಶ

Rescue of three youth workers in Hunsagi

-ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ

-----

ಕನ್ನಡಪ್ರಭ ವಾರ್ತೆ ಯಾದಗಿರಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಉಪ ತಹಶೀಲ್ದಾರರ ನೇತೃತ್ವದಲ್ಲಿ, ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಡೆಸಿ, ಪ್ಯಾನ್ ಇಂಡಿಯಾ ಅಭಿಯಾನವನ್ನು ಕೈಗೊಳ್ಳಲಾಯಿತು.

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆಯನ್ನು ನಡೆಸಿ, ಕಾರ್ಮಿಕ ನಿರೀಕ್ಷಕರು ಸುರಪುರ ವೃತ್ತ ಹುಣಸಗಿರವರ ನೇತೃತ್ವದಲ್ಲಿ ಹುಣಸಗಿ ತಾಲೂಕಿನಲ್ಲಿ ಮೂವರು ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ. ನಂತರ ಕೃಷಿ ಕೆಲಸಕ್ಕೆ ತೆರಳುತ್ತಿದ್ದ ವಾಹನಗಳನ್ನು ತಡೆದು ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಉಪ ತಹಸೀಲ್ದಾರರು, ಕಾರ್ಮಿಕ ನಿರೀಕ್ಷಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಮತ್ತು ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.