ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲು: ಬಿಜೆಪಿ ಪ್ರತಿಭಟನೆ

| Published : Mar 22 2025, 02:02 AM IST

ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲು: ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರಿಂದ ಶುಕ್ರವಾರ ಇಲ್ಲಿಯ ಕೋರ್ಟ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಧಾರವಾಡ: ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರಿಂದ ಶುಕ್ರವಾರ ಇಲ್ಲಿಯ ಕೋರ್ಟ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಮಾಜಿ ಮೇಯರ್‌ ಈರೇಶ ಅಂಚಟಗೇರಿ ಮಾತನಾಡಿ, ರಾಜ್ಯದಲ್ಲಿ ಕೇವಲ ಮುಸ್ಲಿಮರ ತುಷ್ಟೀಕರಣ ಮಾಡುವ ಉದ್ದೇಶದಿಂದ ಧರ್ಮ ಆಧಾರಿತ ರಾಜಕಾರಣ ಮಾಡುವ ಮೂಲಕ ಬಹುಸಂಖ್ಯಾತ ಹಿಂದೂಗಳಿಗೆ ಅನ್ಯಾಯ ಮಾಡಲಾಗಿದೆ. ಇದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ. ಕೂಡಲೇ ರಾಜ್ಯ ಸರ್ಕಾರ ಇಂತಹ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ರಾಜ್ಯ ಸರ್ಕಾರ ಹಿಂದೂಗಳಿಗೆ ಎಲ್ಲ ರೀತಿಯಲ್ಲಿ ಅನ್ಯಾಯ ಎಸಗುತ್ತಿದೆ. ಕೇವಲ ವೋಟ್‌ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಲೇ ಇಂತಹ ನಿರ್ಧಾರ ಕೈಬಿಡಬೇಕು, ಹಿಂದೂಗಳಿಗೆ ಅನ್ಯಾಯ ಮಾಡಬಾರದು. ಇದನ್ನು ಕೈಬಿಡದೆ ಹೋದಲ್ಲಿ ಮುಂಬರುವ ದಿನಮಾನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದರು.

ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ನಾಯಕರ ಪ್ರತಿಕೃತಿ ದಹನ ಮಾಡುವ ಮೂಲಕ ರಸ್ತೆ ತಡೆ ನಡೆಸಿ ಹೋರಾಟ ಕೈಗೊಂಡರು. ಬಿಜೆಪಿ ಮುಖಂಡರಾದ ಮಹೇಂದ್ರ ಕೌತಾಳ, ಲಿಂಗರಾಜ ಪಾಟೀಲ, ಶಿವು ಹಿರೇಮಠ, ಜಯತೀರ್ಥ ಕಟ್ಟಿ, ನಿಂಗಪ್ಪ ಸುತಗಟ್ಟಿ, ಸುನೀಲ ಮೋರೆ, ಶ್ರೀನಿವಾಸ ಕೋಟ್ಯಾನ, ದತ್ತಮೂರ್ತಿ ಕುಲಕರ್ಣಿ, ಶಿವು ಮೆಣಸಿನಕಾಯಿ, ಸಂಜಯ ಕಟ್ಟಿ, ಬಸವರಾಜ ಕುಂದಗೋಳಮಠ, ಸತೀಶ ಶೇಜವಾಡಕರ, ರಾಜು ಕಾಳೆ, ಮೋಹನ ರಾಮದುರ್ಗ, ಮೈಲಾರ ಉಪ್ಪಿನ, ಸುರೇಶ ಬೇದರೆ, ಅಮಿತ ಪಾಟೀಲ, ಪ್ರಮೋದ ಕಾರಕೂನ ಇದ್ದರು.