ಸಾರಾಂಶ
ಚಿಕ್ಕಮಗಳೂರುಒಂದೇ ವಸತಿ ಶಾಲೆ, ಒಂದೇ ಕೊಠಡಿಯಲ್ಲಿ 2 ವರ್ಷಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೀತಿಯಲ್ಲಿ ಆತ್ಮಹತ್ಯೆ.
ಶಾಲೆಯ ಪ್ರಾಂಶುಪಾಲರು - ನಿಲಯ ಪಾಲಕರ ಅಮಾನತು,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಒಂದೇ ವಸತಿ ಶಾಲೆ, ಒಂದೇ ಕೊಠಡಿಯಲ್ಲಿ 2 ವರ್ಷಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೀತಿಯಲ್ಲಿ ಆತ್ಮಹತ್ಯೆ.
- ಈ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹರಂದೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು, ತನಿಖೆ ನಡೆಸಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದರ ಬೆನ್ನಲೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರಾದ ರಜನಿ ಮತ್ತು ನಿಲಯ ಪಾಲಕ (ಪ್ರಭಾರ) ಸುಂದರ ನಾಯ್ಕ ಅವರನ್ನು ಅಮಾನತು ಮಾಡಿ ಕ್ರೈಸ್ ಸಂಸ್ಥೆ ಬುಧವಾರ ಆದೇಶ ಹೊರಡಿಸಿದೆ.ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯತೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕ್ರೈಸ್ ಕಾರ್ಯನಿರ್ವಹಕ ನಿರ್ದೇಶಕ ಪಿ.ಎಸ್. ಕಾಂತರಾಜು ಅವರು ಆದೇಶದಲ್ಲಿ ತಿಳಿಸಿದ್ದಾರೆ.ನ್ಯಾಯಾಧೀಶರಿಂದ ತನಿಖೆ:
ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಭೆ ಇತ್ತೀಚೆಗೆ ನಡೆದು ತೆಗೆದುಕೊಂಡ ನಿರ್ಧಾರದ ಆಧಾರದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್. ಶೋಭ ಅವರನ್ನು ತನಿಖಾಧಿಕಾರಿಯನ್ನಾಗಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಕೆ.ಪಿ.ಶೈಲಾ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.--- ಬಾಕ್ಸ್ -----ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023ರ ಜುಲೈ 27 ರಂದು ಅಮೂಲ್ಯ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 2025ರ ಜೂನ್ 29 ರಂದು 9ನೇ ತರಗತಿ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದಾರೆ.ಮೇಲ್ಕಂಡ ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿ ವರದಿ ಪಡೆಯಲು ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ನೇಮಿಸಲಾಗಿದೆ.