ವಿಜಯಪುರ: ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳಲ್ಲಿ ಕಾನೂನು ತೊಡಕುಗಳಿಲ್ಲದ ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಪರಿಹಾರ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು

ವಿಜಯಪುರ: ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳಲ್ಲಿ ಕಾನೂನು ತೊಡಕುಗಳಿಲ್ಲದ ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಪರಿಹಾರ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪ್ರಜಾಸೇವಾ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಯದಂತೆ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ'''''''' ಎಂಬ ಧ್ಯೇಯದೊಂದಿಗೆ ಪ್ರಜಾಸೇವಾ ಇಲಾಖೆ ಕಾರ್ಯಾರಂಭ ಮಾಡಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ಸೂರಿನಡಿ ಸ್ಥಳದಲ್ಲೇ ದೂರು-ಮನವಿ ಇತ್ಯರ್ಥಪಡಿಸಲು ಈ ಅಭಿಯಾನ ಪ್ರತಿ ಶನಿವಾರವೂ ನಡೆಯಲಿದೆ. ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲೂ ಶಾಸಕರ ಅಧ್ಯಕ್ಷತೆಯಲ್ಲಿ ಆಂದೋಲನ ಸಭೆಗಳು ಜರುಗಲಿವೆ. ಪಿಂಚಣಿ, ವಸತಿ, ಜಮೀನು ಪೋಡಿ, ಖಾತೆ ಬದಲಾವಣೆ, ರಸ್ತೆ, ಉದ್ಯೋಗ ಖಾತರಿ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗೆ ಇಲ್ಲಿ ನೇರ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಭಾಗ್ಯಲಕ್ಷ್ಮಿ ಬಾಂಡ್ ಹಾಗೂ ಉದ್ಯೋಗ ಖಾತರಿ ಜಾಬ್ ಕಾರ್ಡ್‌ಗಳ ವಿತರಣೆ. ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಡಿ ಹನಿ ನೀರಾವರಿ ಸಲಕರಣೆಗಳ ವಿತರಣೆ.

ಸಾಮಾಜಿಕ ಭದ್ರತೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆಯಡಿ ಪಿಂಚಣಿ ಮಂಜೂರಾತಿ ಪತ್ರ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ವಿತರಣೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಪಂ ಸಿಇಒ ಡಾ.ವಾಸಂತಿ ಅಮರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಪುರಸಭೆ ಸದಸ್ಯ ಎಂ.ಸತೀಶ್ ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ನಾರಾಯಣಸ್ವಾಮಿ, ಪುರಸಭೆ ಅಧ್ಯಕ್ಷೆ ಭವ್ಯಮಹೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.